ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇದೀಗ ಮೈಸೂರು ಸೇಲ್ಸ್ ಇಂಟರ್ ನ್ಯಾಶನಲ್ ಲಿಮಿಟೆಡ್ (MSIL) ನ ವಿವಿಧ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಈಗಲೇ ಪರಿಶೀಲಿಸಬಹುದು. ಆಯ್ಕೆಪಟ್ಟಿಯನ್ನು ಹೇಗೆ ಪರಿಶೀಲಿಸುವುದು, ಆಕ್ಷೇಪಣೆಗಳನ್ನು ಹೇಗೆ ಸಲ್ಲಿಸುವುದು ಮತ್ತು ಮುಂದಿನ ಪ್ರಕ್ರಿಯೆ ಏನು ಎಂಬುದನ್ನು ಈಗ ನೋಡೋಣ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದಿನಾಂಕ 23-06-2023 ರಂದು ಅಧಿಸೂಚಿಸಿದ ಮೈಸೂರು ಸೇಲ್ಸ್ ಇಂಟರ್ ನ್ಯಾಶನಲ್ ಲಿಮಿಟೆಡ್ (MSIL) ನಲ್ಲಿ ಖಾಲಿ ಇರುವ72 ಗುಮಾಸ್ತರು, ಮಾರಾಟ ಪ್ರತಿನಿಧಿ, ಸೇಲ್ಸ್ ಮೇಲ್ವಿಚಾರಕರು ಮತ್ತು ಸಹಾಯಕ ವ್ಯವಸ್ಥಾಪಕರು (ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಕ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ, ನಂತರ ಅರ್ಹತಾ ಪಟ್ಟಿಯನುಸಾರ ಮೂಲ ದಾಖಲಾತಿಗಳನ್ನು ಪರಿಶೀಲಿಸಿ ಅರ್ಹತಾ ಮತ್ತು ಮೀಸಲಾತಿ ಆಧಾರದ ಮೇಲೆ ಸರ್ಕಾರದ ಆದೇಶಗಳನ್ವಯ ಅರ್ಹರಾಗಿರುವ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇದೀಗ ಪ್ರಕಟಿಸಿದೆ.
ಅಭ್ಯರ್ಥಿಗಳು ಸದರಿ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಗೊಂಡ 7 ದಿನಗಳವಳಗಾಗಿ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿರುತ್ತದೆ.
📝 ಆಕ್ಷೇಪಣೆಗಳನ್ನು ಸಲ್ಲಿಸುವ ವಿಳಾಸ : ಸದಸ್ಯ ಕಾರ್ಯದರ್ಶಿ ಮತ್ತು ಮುಖ್ಯ ಆಡಳಿತಾಧಿಕಾರಿ ಆಯ್ಕೆ ಸಮಿತಿ, ಎಂಎಸ್‌ಐಎಲ್, ಬೆಂಗಳೂರು
ಈ ವಿಳಾಸಕ್ಕೆ ಮಾತ್ರ ತಲುಪುವಂತೆ ಆಕ್ಷೇಪಣೆಗಳನ್ನು ಕಳುಹಿಸತಕ್ಕದ್ದು, ಆಕ್ಷೇಪಣೆಗಳನ್ನು ಸ್ವೀಕರಿಸುವ ಕೊನೆಯ ದಿನಾಂಕದೊಳಗಾಗಿ ಸಲ್ಲಿಸಬೇಕು ಅವಧಿಯ ನಂತರ ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಅಭ್ಯರ್ಥಿಗಳ ಆಕ್ಷೇಪಣೆಗಳು ಸಮಯಕ್ಕೆ ಸರಿಯಾಗಿ ತಲುಪಲು ವಿಳಂಬವಾದಲ್ಲಿ ಮೈಸೂರು ಸೇಲ್ಸ್ ಇಂಟರ್ ನ್ಯಾಶನಲ್ ಲಿಮಿಟೆಡ್ (MSIL) ಜವಾಬ್ದಾರಿಯಾಗಿರುವುದಿಲ್ಲ.






Comments