Loading..!

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:15 ಎಪ್ರಿಲ್ 2025
Image not found

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಬೆಂಗಳೂರಿನಲ್ಲಿ ಖಾಲಿ ಇರುವ ಪ್ರಾಜೆಕ್ಟ್‌ ಟೆಕ್ನಿಕಲ್‌ ಸಪೋರ್ಟ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.


ಹುದ್ದೆಯ ವಿವರಗಳು :
- ಹುದ್ದೆಯ ಹೆಸರು : ಪ್ರಾಜೆಕ್ಟ್‌ ಟೆಕ್ನಿಕಲ್‌ ಸಪೋರ್ಟ್
- ಒಟ್ಟು ಹುದ್ದೆಗಳು : 01
- ಉದ್ಯೋಗ ಸ್ಥಳ : ಬೆಂಗಳೂರು, ಕರ್ನಾಟಕ


ವಿದ್ಯಾರ್ಹತೆ :
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೋಮಾ, DMLT ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. ಕನಿಷ್ಠ 2 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು. 


ವಯೋಮಿತಿ :
ಅಭ್ಯರ್ಥಿಗಳು ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.


ವೇತನ ಶ್ರೇಣಿ :
ಅಭ್ಯರ್ಥಿಗಳು ಮಾಸಿಕ ರೂ.18,000/- ವೇತನವನ್ನು ನಿಗದಿಪಡಿಸಲಾಗಿದೆ.


ಆಯ್ಕೆ ವಿಧಾನ :
ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. 


ಅರ್ಜಿಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.


ಅರ್ಜಿಸಲ್ಲಿಸುವ ಕ್ರಮಗಳು :
- ಅಧಿಕೃತ ವೆಬ್‌ಸೈಟ್‌‌‌ https://www.nimhans.ac.in/ ಗೆ ಭೇಟಿ ನೀಡಿ.
- ನೀವು ಅರ್ಜಿ ಸಲ್ಲಿಸಲಿರುವ NIMHANS ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಅಧಿಸೂಚನೆ ಲಿಂಕ್‌ನಿಂದ ಪ್ರಾಜೆಕ್ಟ್‌ ಟೆಕ್ನಿಕಲ್‌ ಸಪೋರ್ಟ್ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ‌ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.


ಸಂದರ್ಶನದ ವಿವರಗಳು :
- ದಿನಾಂಕ : ಏಪ್ರಿಲ್ 25, 2025
- ಸ್ಥಳ : Lecture Hall-I, 1st floor (Old Admin Block), NIMHANS, Bengaluru-560029, Karnataka 


ಹೆಚ್ಚಿನ ಮಾಹಿತಿಗಾಗಿ, ಅಧಿಕೃತ ವೆಬ್‌ಸೈಟ್‌ https://www.nimhans.ac.in/ ಗೆ ಭೇಟಿ ನೀಡಿ. 

Comments