ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 2025ನೇ ಸಾಲಿನ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಅಧಿಸೂಚನೆಯ ಮೂಲಕ ತಾಂತ್ರಿಕ ಅಧಿಕಾರಿ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 11-ಜುಲೈ-2025ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಈ ಹುದ್ದೆಯನ್ನು ಒಂದು ವರ್ಷದ ಅವಧಿಯ ವರೆಗೆ ನೇಮಕಮಾಡಿಕೊಳ್ಳಲಾಗುತ್ತದೆ.
ಶೈಕ್ಷಣಿಕ ಅರ್ಹತೆ : NIMHANS ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ M.Sc ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ: ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರವಾಗಿ ಗರಿಷ್ಠ 35 ವರ್ಷಗಳ ವಯಸ್ಸನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ ಮಾನದಂಡಗಳ ಪ್ರಕಾರ ವಯೋಮಿತಿ ಸಡಿಲಿಕೆ ಇರಲಿದೆ.
ಆಯ್ಕೆ ಪ್ರಕ್ರಿಯೆ :
ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ.
ಸಂದರ್ಶನದ ವಿಳಾಸ :
ಸಂದರ್ಶನ ನಡೆಯುವ ದಿನಾಂಕ : 11/07/2025 ಬೆಳಿಗ್ಗೆ 10:00 ಕ್ಕೆ
ಸಂದರ್ಶನ ನಡೆಯುವ ಸ್ಥಳ : 4 ನೇ ಮಹಡಿ NBRC ಕಟ್ಟಡ, ಆಡಳಿತಾತ್ಮಕ ಬ್ಲಾಕ್, ನಿಮ್ಹಾನ್ಸ್, ಬೆಂಗಳೂರು.
Comments