Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಪೊಲೀಸ್ ಕಾನ್ಸ್‌ಟೇಬಲ್(PC) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಗೆ ದಿನಾಂಕ ನಿಗದಿಪಡಿಸಿ ಪ್ರವೇಶ ಪತ್ರಗಳನ್ನು ಪ್ರಕಟಿಸಿದೆ
Published by: Bhagya R K | Date:7 ಸೆಪ್ಟೆಂಬರ್ 2023
Image not found

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 420 ಕಲ್ಯಾಣ ಕರ್ನಾಟಕದ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (PC - CAR / DAR ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿತ್ತು. ಪ್ರಸ್ತುತ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಯ ಮೊದಲ ಹಂತವಾದ ಲಿಖಿತ ಪರೀಕ್ಷೆಯ ದಿನಾಂಕವನ್ನು ಇಲಾಖೆಯು ನಿಗದಿಪಡಿಸಿದೆ, ಪ್ರಸ್ತುತ ಈ ಹುದ್ದೆಗಳ ಲಿಖಿತ ಪರೀಕ್ಷೆಯನ್ನು ದಿನಾಂಕ 10 ಸೆಪ್ಟೆಂಬರ್ 2023 ರಂದು ಇಲಾಖೆಯು ನಿಗದಿಪಡಿಸಿ ಪ್ರಕಟಣೆ ಹೊರಡಿಸಿದೆ ಮತ್ತು ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳ ಪ್ರವೇಶಪತ್ರಗಳನ್ನು ಜಾಲತಾಣದಲ್ಲಿ ಪ್ರಕಟಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು ಹಾಗೂ ಪ್ರವೇಶ ಪತ್ರದಲ್ಲಿ ತಿಳಿಸಿದ ದಿನಾಂಕ ಹಾಗೂ ಸ್ಥಳದಲ್ಲಿ ಕಡ್ಡಾಯವಾಗಿ ಹಾಜರಾಗಲು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Comments

Raghu Bhovi ಸೆಪ್ಟೆ. 7, 2023, 7:26 ಅಪರಾಹ್ನ
Raghu Bhovi ಸೆಪ್ಟೆ. 7, 2023, 7:27 ಅಪರಾಹ್ನ