ರೈಲ್ವೆ ನೇಮಕಾತಿ ಮಂಡಳಿ ಮುಂದೆ ನಡೆಸುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ಕಲ್ಪಿಸಿದೆ
Published by: Yallamma G | Date:5 ಆಗಸ್ಟ್ 2024

ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕನ್ನಡದಲ್ಲಿಯೂ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು. 'ಇಲಾಖೆಯಲ್ಲಿ ಬಡ್ತಿ ನೀಡಲು ನಡೆಸುವ 'ಸಾಮಾನ್ಯ ವಿಭಾಗ ಸ್ಪರ್ಧಾತ್ಮಕ ಪರೀಕ್ಷೆ' (ಜಿಡಿಸಿಇ) ಬರೆಯಲು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಅವಕಾಶ ನೀಡಲಾಗಿತ್ತು. ಕನ್ನಡದಲ್ಲಿಯೂ ಅವಕಾಶ ಇರಬೇಕು ಎಂದು ಒತ್ತಾಯ ಬಂದಿರುವುದರಿಂದ ಪರೀಕ್ಷೆಯನ್ನು ಮುಂದಕ್ಕೆ ಹಾಕಲಾಗಿದೆ. ಕನ್ನಡ ದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ನೀಡಿ ಸುತ್ತೋಲೆ ಹೊರಡಿಸುವಂತೆ ರೈಲ್ವೆ ಬೋರ್ಡ್ ಪ್ರಧಾನ ವ್ಯವಸ್ಥಾಪಕರಿಗೆ ಸೂಚನೆ ನೀಡಲಾಗಿದೆ' ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.

Comments