Loading..!

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 2,000 ಕ್ಕೂ ಅಧಿಕ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ | ಈ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ
Published by: Bhagya R K | Date:1 ಫೆಬ್ರುವರಿ 2024
Image not found

ಕರ್ನಾಟಕದಲ್ಲಿನ ಗ್ರಾಮ ಲೆಕ್ಕಾಧಿಕಾರಿಗಳ ಮತ್ತು ಸರ್ವೇಯರ್ ಹುದ್ದೆಗಳ ನಿರೀಕ್ಷೆಯಲ್ಲಿದ್ದ ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ ಇದೀಗ ಸಿಹಿಸುದ್ದಿ ಬಂದಿದ್ದು, ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 2,000 ಕ್ಕೂ ಅಧಿಕ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. 1,500 ಗ್ರಾಮ ಲೆಕ್ಕಾಧಿಕಾರಿಗಳು, 500 ಸರ್ವೇಯರ್ ಮತ್ತು 60 ಎಡಿಎಲ್ಆರ್ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದ್ದು, ಈ ಜವಾಬ್ದಾರಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ನೀಡಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಈ ಹುದ್ದೆಗಳ ಆಕಾಂಕ್ಷಿಗಳು ಕೂಡಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ.
* ಈ ಕುರಿತು ಮಾನ್ಯ ಮುಖ್ಯಮಂತ್ರಿ ಅವರು ಅಧಿಕೃತವಾಗಿ ತಿಳಿಸಿದ್ದು, ಇನ್ನೇನು ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ

Comments

User ಫೆಬ್ರ. 20, 2024, 10:27 ಪೂರ್ವಾಹ್ನ