ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ ಅಗತ್ಯವಿರುವ ಅಕೌಂಟ್ಸ್ ಮ್ಯಾನೇಜರ್ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಯನ್ನು ಹೊರ ಗುತ್ತಿಗೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಹುದ್ದೆಯ ವಿವರಗಳು :
ಹುದ್ದೆಯ ಹೆಸರು: ಅಕೌಂಟ್ಸ್ ಮ್ಯಾನೇಜರ್ (Accounts Manager)
ನೇಮಕಾತಿ ಸಂಸ್ಥೆ: ಜಿಲ್ಲಾ ಪಂಚಾಯತ್ ಶಿವಮೊಗ್ಗ.
ಕೆಲಸದ ಸ್ಥಳ: ಶಿವಮೊಗ್ಗ ಜಿಲ್ಲೆ.
ನೇಮಕಾತಿ ವಿಧಾನ: ಗುತ್ತಿಗೆ ಆಧಾರದ (Contract Basis) ಮೇಲಿನ ನೇರ ನೇಮಕಾತಿಯಾಗಿರುತ್ತದೆ.
ಅರ್ಹತೆಗಳು ಮತ್ತು ಮಾನದಂಡಗಳು :
=> ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ B.Com / M.Com / MBA (Finance) ಅಥವಾ ತತ್ಸಮಾನ ಪದವಿ ಪಡೆದಿರಬೇಕು.
=> ಅನುಭವ: ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 2 ರಿಂದ 3 ವರ್ಷಗಳ ಕೆಲಸದ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ.
=> ತಾಂತ್ರಿಕ ಕೌಶಲ: ಟ್ಯಾಲಿ (Tally ERP), ಎಂಎಸ್ ಆಫೀಸ್ (MS Office) ಮತ್ತು ಕಂಪ್ಯೂಟರ್ ಆಧಾರಿತ ಅಕೌಂಟಿಂಗ್ ಜ್ಞಾನ ಕಡ್ಡಾಯ.
ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ:
ಕನಿಷ್ಠ ವಯೋಮಿತಿ: 21 ವರ್ಷಗಳು ಪೂರ್ಣಗೊಂಡಿರಬೇಕು.
ಗರಿಷ್ಠ ವಯೋಮಿತಿ: 35 ವರ್ಷಗಳ ಒಳಗಿರಬೇಕು.
ಸರ್ಕಾರದ ನಿಯಮಗಳ ಪ್ರಕಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ : ಶೈಕ್ಷಣಿಕ ಅರ್ಹತೆ ಮತ್ತು ಅನುಭವವನ್ನು ಪರಿಗಣಿಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಡಿಸೆಂಬರ್ 17, 2025
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 01, 2026






Comments