Loading..!

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ(SSC)ದಿಂದ 17727 ಹುದ್ದೆಗಳ ನೇಮಕಾತಿಯ ಪರೀಕ್ಷಾ ಪ್ರವೇಶ ಪತ್ರ ಇದೀಗ ಪ್ರಕಟ
Published by: Bhagya R K | Date:7 ಸೆಪ್ಟೆಂಬರ್ 2024
not found

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 24/06/2024 ರಂದು 17727 Combined Graduate Level (CGL) (Group- B & C ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು, ಸದರಿ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ನೇಮಕಾತಿಯ ಮೊದಲನೇ ಹಂತವಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು 2024 ಸೆಪ್ಟೆಂಬರ್-9 ರಿಂದ 2024 ಸೆಪ್ಟೆಂಬರ್ 26 ರ ವರೆಗೆ ನಡೆಸಲು ನಿರ್ಧರಿಸಲಾಗಿದೆ. SSS ಯು ಪರೀಕ್ಷಾ ಪ್ರವೇಶ ಪತ್ರವನ್ನು ಇದೀಗ ತನ್ನ ಜಾಲತಾಣದಲ್ಲಿ ಪ್ರಕಟಿಸಿ, ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಲು ಇದೀಗ ಅವಕಾಶ ಕಲ್ಪಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನೂ ಡೌನ್ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಈಗಿನಿಂದಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ.   

- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ. 

Comments