Loading..!

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಯುವ ವೃತ್ತಿಪರರ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:11 ಆಗಸ್ಟ್ 2025
Image not found

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2025ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಯಂಗ್ ಪ್ರೊಫೆಷನಲ್ಸ್ 2 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಅಖಿಲ ಭಾರತ ಸರ್ಕಾರಿ ಉದ್ಯೋಗದ ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಪತ್ರಿಕೆಯಲ್ಲಿ ಈ ಜಾಹೀರಾತು ಪ್ರಕಟವಾದ 14 ದಿನಗಳ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.


ಅರ್ಹತೆ : 
ಭಾರತ ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಕಾಲೇಜು / ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ.


SSC ನೇಮಕಾತಿ 2025 ವಯಸ್ಸಿನ ಮಿತಿ : 
ಕನಿಷ್ಠ ವಯಸ್ಸಿನ ಮಿತಿ: 21 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ: 35 ವರ್ಷಗಳು
ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.


ಸಂಬಳ : 
ಆರಂಭಿಕ ಸಂಭಾವನೆ ತಿಂಗಳಿಗೆ ರೂ.40,000/-. ತೃಪ್ತಿದಾಯಕ ಕಾರ್ಯಕ್ಷಮತೆಯ ಪರಿಶೀಲನೆಯ ಆಧಾರದ ಮೇಲೆ ಒಪ್ಪಂದವನ್ನು ಇನ್ನೊಂದು ವರ್ಷ ವಿಸ್ತರಿಸಿದರೆ, ಪ್ರತಿ ಬಾರಿಯೂ ಸಂಭಾವನೆಯನ್ನು 5% ವರೆಗೆ ಹೆಚ್ಚಿಸಬಹುದು, ಗರಿಷ್ಠ ಮಿತಿ ಆರಂಭಿಕ ಸಂಭಾವನೆಯ 1.25 ಪಟ್ಟು.


ಪ್ರಮುಖ ದಿನಾಂಕಗಳು :   
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 07-08-2025
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :ಪತ್ರಿಕೆಯಲ್ಲಿ ಈ ಜಾಹೀರಾತು ಪ್ರಕಟವಾದ 14 ದಿನಗಳ ಒಳಗೆ

Comments