Others 28 ಜನವರಿ 2025 1 year ago
Published by Yallamma G

ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಹಿರಿಯ ಸಂಶೋಧನಾ ಫೆಲೋ (SRF) ಮತ್ತು ಯಂಗ್ ಪ್ರೊಫೆಷನಲ್-I ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹು. ಸೇವಾ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಈ ಹುದ್ದೆಯನ್ನು 1 ವರ್ಷದ ಅವಧಿಯವರೆಗೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬಹುದು.  

ಹುದ್ದೆಗಳ ವಿವರ : 
ಹಿರಿಯ ಸಂಶೋಧನಾ ಫೆಲೋ (SRF) : 1
ಯಂಗ್ ಪ್ರೊಫೆಷನಲ್-I : 1

ಉದ್ಯೋಗ ಸ್ಥಳ: 
ಧಾರವಾಡ, ಕರ್ನಾಟಕ

ವಿದ್ಯಾರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂ.ಎಸ್ಸಿ ಅಥವಾ ಬಿ.ಎಸ್ಸಿ ಪದವಿ ಹೊಂದಿರಬೇಕು.  

ವಯೋಮಿತಿ :
ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ನಿಗದಿತ ವಯೋಮಿತಿಯನ್ನು ಪೂರೈಸಿರಬೇಕು.  

ವೇತನ :
ಹಿರಿಯ ಸಂಶೋಧನಾ ಫೆಲೋ (SRF) : ₹37,000/- ಮಾಸಿಕ  
ಯಂಗ್ ಪ್ರೊಫೆಷನಲ್-I: ₹30,000/- ಮಾಸಿಕ  

ಆಯ್ಕೆ ವಿಧಾನ :
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ. 

 ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 02 ಫೆಬ್ರವರಿ 2025 ರಂದು ಬೆಳಿಗ್ಗೆ 11:00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳು ಮತ್ತು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. ಅಭ್ಯರ್ಥಿಗಳು ಯಾವುದೇ ಸಂದರ್ಭದಲ್ಲಿ ಅರ್ಜಿಗಳನ್ನು ಮುಂಗಡವಾಗಿ ಕಳುಹಿಸಬಾರದು. 

ಸಂದರ್ಶನ ನಡೆಯುವ ಸ್ಥಳ : 
ಸಂದರ್ಶನ ಕೊಠಡಿ, ಡೀನ್ (ಕೃಷಿ),
ಕೃಷಿ ವಿಶ್ವವಿದ್ಯಾಲಯ, ಧಾರವಾಡ 

ಪ್ರಮುಖ ದಿನಾಂಕಗಳು:
- ಅಧಿಸೂಚನೆ ಬಿಡುಗಡೆ: 21-01-2025  
- ವಾಕ್-ಇನ್ ಸಂದರ್ಶನ : 05-02-2025 (ಬೆಳಿಗ್ಗೆ 11:00 AM)  

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.