ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನವೆಂಬರ್ 2025 ರ ಯುಸಿಎಸ್‌ಎಲ್ ಅಧಿಕೃತ ಅಧಿಸೂಚನೆಯ ಮೂಲಕ ಕಮಿಷನಿಂಗ್ ಎಂಜಿನಿಯರ್ ಮತ್ತು ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗುತ್ತದೆ. ಈ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಉಡುಪಿ - ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 24-ನವೆಂಬರ್-2025 ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.
ಹುದ್ದೆಗಳ ವಿವರ :
- ಕಮಿಷನಿಂಗ್ ಎಂಜಿನಿಯರ್ (ಮೆಕ್ಯಾನಿಕಲ್) : 2
- ಕಮಿಷನಿಂಗ್ ಎಂಜಿನಿಯರ್ (ಎಲೆಕ್ಟ್ರಿಕಲ್ / ಎಲೆಕ್ಟ್ರಾನಿಕ್ಸ್) : 2
- ಅಸಿಸ್ಟೆಂಟ್ (ಎಲೆಕ್ಟ್ರಿಷಿಯನ್/ಶಿಪ್ ರೈಟ್/ಮೆಕ್ಯಾನಿಷಿಯನ್) : 11
ವಿದ್ಯಾರ್ಹತೆ : ಈ ಹುದ್ದೆಗಳನ್ನು ನೇಮಕಾತಿ ನಿಯಮಾನುಸಾರ ಈ ಕೆಳಗಿನಂತೆ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ.
ಕಮಿಷನಿಂಗ್ ಎಂಜಿನಿಯರ್ (ಮೆಕ್ಯಾನಿಕಲ್) : ಮೆಕ್ಯಾನಿಕಲ್ / ಮೆರೈನ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ
ಕಮಿಷನಿಂಗ್ ಎಂಜಿನಿಯರ್ (ಎಲೆಕ್ಟ್ರಿಕಲ್ / ಎಲೆಕ್ಟ್ರಾನಿಕ್ಸ್) : ಎಲೆಕ್ಟ್ರಿಕಲ್ / ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ
ಕಮಿಷನಿಂಗ್ ಅಸಿಸ್ಟೆಂಟ್ (ಎಲೆಕ್ಟ್ರಿಷಿಯನ್/ಶಿಪ್ ರೈಟ್/ಮೆಕ್ಯಾನಿಷಿಯನ್) : 10 ನೇ
ಮಾಸಿಕ ವೇತನ :
- ಕಮಿಷನಿಂಗ್ ಎಂಜಿನಿಯರ್ (ಮೆಕ್ಯಾನಿಕಲ್) ಮತ್ತು ಕಮಿಷನಿಂಗ್ ಎಂಜಿನಿಯರ್ (ಎಲೆಕ್ಟ್ರಿಕಲ್ / ಎಲೆಕ್ಟ್ರಾನಿಕ್ಸ್) ಹುದ್ದೆಗಳಿಗೆ : ರೂ. 50,000 – 53,045/-
- ಅಸಿಸ್ಟೆಂಟ್ (ಎಲೆಕ್ಟ್ರಿಷಿಯನ್/ಶಿಪ್ ರೈಟ್/ಮೆಕ್ಯಾನಿಷಿಯನ್) ಹುದ್ದೆಗಳಿಗೆ ಹುದ್ದೆಗಳಿಗೆ : ರೂ. 48,000 – 50,924/-
ವಯೋಮಿತಿ: ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 24-11-2025 ರಂತೆ 45 ವರ್ಷಗಳು.
ವಯೋಮಿತಿ ಸಡಿಲಿಕೆ : ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಮಾನದಂಡಗಳ ಪ್ರಕಾರ
ಸಂದರ್ಶನದ ವಿವರ : ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 24-ನವೆಂಬರ್-2025 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ : ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (ಯುಸಿಎಸ್‌ಎಲ್), ಮಲ್ಪೆ ಹಾರ್ಬರ್ ಕಾಂಪ್ಲೆಕ್ಸ್ (ಮಲ್ಪೆ), ಉಡುಪಿ-576108, ಕರ್ನಾಟಕ. 24-ನವೆಂಬರ್-2025 ರಂದು
ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆ ದಿನಾಂಕ: 10-11-2025
ವಾಕ್-ಇನ್ ದಿನಾಂಕ: 24-ನವೆಂಬರ್-2025






Comments