2025ರ ಮೇ 25ರಂದು ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಿದ ಸಿವಿಲ್ ಸರ್ವೀಸ್ (IAS, IPS, IFS, IRS ಮತ್ತು ಇತರ ಹುದ್ದೆಗಳು) ನೇಮಕಾತಿಗೆ ಸಂಬಂಧಿಸಿದ ಪ್ರಾಥಮಿಕ ಪರೀಕ್ಷೆಯ (Prelims) ಫಲಿತಾಂಶವನ್ನು ಆಯೋಗ ಇದೀಗ ಅಧಿಕೃತವಾಗಿ ಪ್ರಕಟಿಸಿದೆ. ಕೇವಲ 15-20 ದಿನಗಳೊಳಗೆ ಫಲಿತಾಂಶ ಪ್ರಕಟಿಸಿರುವುದು ಈ ಬಾರಿ ಗಮನ ಸೆಳೆದಿದೆ.
ಒಟ್ಟು 979 ಹುದ್ದೆಗಳ ನೇಮಕಾತಿಗಾಗಿ ಈ ಪರೀಕ್ಷೆ ನಡೆಸಲಾಗಿತ್ತು. ದೇಶದ ಮೂಲೆ ಮೂಲೆಗಳಿಂದ ಲಕ್ಷಾಂತರ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದೀಗ UPSC ನ ವೆಬ್‌ಸೈಟ್‌ನಲ್ಲಿ ಮುಖ್ಯ ಪರೀಕ್ಷೆಗೆ (Mains Exam) ಆಯ್ಕೆಯಾದ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಪ್ರಿಲಿಮ್ಸ್ ತೇರ್ಗಡೆಯಾದ ಅಭ್ಯರ್ಥಿಗಳು ಮುಂದಿನ ಹಂತವಾಗಿರುವ ಮುಖ್ಯ ಪರೀಕ್ಷೆಗೆ ತಯಾರಿ ನಡೆಸಬೇಕಾಗುತ್ತದೆ. UPSC ಶೀಘ್ರದಲ್ಲೇ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಲು ಸನ್ನದ್ದವಾಗಿದೆ.
Comments