Loading..!

ಕರ್ನಾಟಕ ರಾಜ್ಯದಲ್ಲಿ ಖಾಲಿ ಇರುವ 1,700 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ | ಈ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ
Published by: Yallamma G | Date:10 ಸೆಪ್ಟೆಂಬರ್ 2023
Image not found

ಕರ್ನಾಟಕದಲ್ಲಿನ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳ ನಿರೀಕ್ಷೆಯಲ್ಲಿದ್ದ ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ ಇದೀಗ ಸಿಹಿಸುದ್ದಿ ಬಂದಿದ್ದು, ಕರ್ನಾಟಕ ರಾಜ್ಯದಲ್ಲಿ ಖಾಲಿ ಇರುವ17,00 ಗ್ರಾಮ ಲೆಕ್ಕಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ನೇಮಕಾತಿ ಮಾಡಿಕೊಳ್ಳಲು ಸಿದ್ಧತೆ ನಡೆಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.  ಈ ಹುದ್ದೆಗಳ ಆಕಾಂಕ್ಷಿಗಳು ಕೂಡಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ.
* ಈ ಕುರಿತು ಮಾನ್ಯ ಮುಖ್ಯಮಂತ್ರಿ ಅವರು ಅಧಿಕೃತವಾಗಿ ತಿಳಿಸಿದ್ದು, ಇನ್ನೇನು ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ.

Comments

Gajendra T Gaja ಸೆಪ್ಟೆ. 11, 2023, 9:27 ಪೂರ್ವಾಹ್ನ