ಶೀಘ್ರದಲ್ಲೇ 750 ಗ್ರಾಮ ಲೆಕ್ಕಾಧಿಕಾರಿ (Village Accountant) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಗೊಳ್ಳಲಿದೆ | ಈ ಕುರಿತು ಮಾಹಿತಿ ನಿಮಗಾಗಿ
Published by: Yallamma G | Date:12 ಡಿಸೆಂಬರ್ 2023

750 ಗ್ರಾಮ ಲೆಕ್ಕಾಧಿಕಾರಿ (Village Accountant) / ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಕ್ಕಾಗಿ ಈಗಾಗಲೇ ಅನುಮೋದನೆ ದೊರೆತಿದ್ದು, ಶೀಘ್ರದಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗುವುದು, ಹಲವು ವರ್ಷಗಳಿಂದ ರಾಜ್ಯದಲ್ಲಿ ಖಾಲಿ ಉಳಿದಿರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಕ್ಕೆ ಶೀಘ್ರದಲ್ಲಿಯೇ ಚಾಲನೆ ದೊರಕಲಿದೆ ಹಾಗಾಗಿ ಉದ್ಯೋಗ ಆಕಾಂಕ್ಷಿಗಳು ಕೂಡಲೇ ತಮ್ಮ ತಯಾರಿಯನ್ನು ಮತ್ತಷ್ಟು ಚುರುಕುಗೊಳಿಸಿ ಈ ನೇಮಕಾತಿಯಲ್ಲಿ ಯಶಸ್ವಿಯಾಗಿ.....
- ಈ ಹುದ್ದೆಗಳನ್ನುಈ ಮೊದಲು PUC ಮೆರಿಟ್ ಆಧಾರದಲ್ಲಿ ನೇಮಕಾತಿ ಮಾಡಲಾಗುತ್ತಿತ್ತು, ಆದರೆ ಇದೀಗ ಅದರ ಬದಲು KEA /KPSC ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಭರ್ತಿ ಮಾಡಲಾಗುತ್ತದೆ.
- ಗ್ರಾಮ ಲೆಕ್ಕಾಧಿಕಾರಿ ಎಂದು ಚಿರಪರಿಚಿತವಾಗಿದ್ದ ಹುದ್ದೆಗಳಿಗೆ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳು ಎಂದು ಮರು ನಾಮಕರಣ ಮಾಡಲಾಗಿದೆ.

Comments