Loading..!

ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ
Published by: Yallamma G | Date:3 ಜುಲೈ 2025
Image not found

       ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಈ ಮೂಲಕ ಪ್ರಕಟಿಸುವುದೆನೆಂದರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಯಾದಗಿರಿ ಜಿಲ್ಲೆಯಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಬ್ಲಾಕ್ ಸಂಯೋಜಕರು ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


   ವಿದ್ಯಾರ್ಹತೆ, ಅನುಭವ ಹಾಗೂ ಉಸ್ತುವಾರಿಯಲ್ಲಿ ಉತ್ತಮ ಕೆಲಸ ನಿರ್ವಹಿಸಬಲ್ಲ, ತರಬೇತಿಗಳನ್ನು ಹಮ್ಮಿಕೊಳ್ಳಲು ಸಮರ್ಥ್ಯ, ಕೌಶಲ್ಯ ಹೊಂದಿರುವ, ಗಣಕಯಂತ್ರ ನಿರ್ವಹಣೆಯಲ್ಲಿ ಪರಿಣಿತಿ, ಕನ್ನಡ ಮತ್ತು ಅಂಗ್ಲ ಭಾಷೆಗಳಲ್ಲಿ ಪರಿಪೂರ್ಣ ಹಿಡಿತವುಳ್ಳ ಅಭ್ಯರ್ಥಿಗಳನ್ನು ನೇರವಾಗಿ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ.


ಶೈಕ್ಷಣಿಕ ಅರ್ಹತೆ: WCD ಯಾದಗಿರಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು .


ವಯೋಮಿತಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಾಗಲಕೋಟೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 45 ವರ್ಷಗಳು.


ಆಯ್ಕೆ ವಿಧಾನ : 
ಸಂದರ್ಶನ/ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳು/ಅನುಭವ/ಕಂಪ್ಯೂಟರ್ ಪರೀಕ್ಷೆಗಳನ್ನು ನಡೆಸುವ ಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. 


ಅರ್ಜಿ ಸಲ್ಲಿಸುವ ವಿಧಾನ : 
- ಮೊದಲನೆಯದಾಗಿ WCD ಯಾದಗಿರಿ ನೇಮಕಾತಿ ಅಧಿಸೂಚನೆ 2025 ಅನ್ನು ಸಂಪೂರ್ಣವಾಗಿ ಓದಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
- ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಛಾಯಾಚಿತ್ರ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
- ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
- ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
- ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಲಾದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.
- ಕೊನೆಗೆ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಲಾಗಿದೆ. ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಿದ ವಿಳಾಸಕ್ಕೆ (ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ) ಕಳುಹಿಸಬೇಕು.


ಅರ್ಜಿ ಸಲ್ಲಿಸುವ ವಿಳಾಸ : 
ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯಾದಗಿರಿ, ಕೊಠಡಿ ಸಂಖ್ಯೆ: ಸಿ-17, ಮೊದಲ ಮಹಡಿ, ಜಿಲ್ಲಾಡಳಿತ ಕಟ್ಟಡ ಸಂಕೀರ್ಣ, ಚಿತ್ತಾಪುರ ರಸ್ತೆ, ಯಾದಗಿರಿ - 585202 ಗೆ


ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-07-2025
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:17-ಜುಲೈ-2025

Comments