Loading..!

ಕೇಂದ್ರೀಯ ವಿದ್ಯಾಲಯಗಳಲ್ಲಿ 5193 ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ
| Date:5 ಜನವರಿ 2019
not found
ಕೇಂದ್ರೀಯ ವಿದ್ಯಾಲಯ ಸಂಘಟನೆಯು (ಕೆವಿಎಸ್‌) ದೇಶದಾದ್ಯಂತ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಇಲಾಖಾವಾರು ಪರೀಕ್ಷೆಗಳ ಮೂಲಕ ಭರ್ತಿ ಮಾಡಲು ನಿರ್ಧರಿಸಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅಧೀನದಲ್ಲಿರುವ ಕೆವಿಎಸ್‌, ಕರ್ನಾಟಕ ಸೇರಿದಂತೆ ದೇಶದಾದ್ಯಂತ 1064 ಶಾಲೆಗಳನ್ನು ಹೊಂದಿದೆ. ಈ ಶಾಲೆಗಳಲ್ಲಿ 2017-18ನೇ ಸಾಲಿಗೆ ಸ್ನಾತಕೋತ್ತರ ಪದವೀಧರ ಶಿಕ್ಷಕರು (ಪಿಜಿಟಿ), ಪದವೀಧರ ಶಿಕ್ಷಕರು (ಟಿಜಿಟಿ) , ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರು ಸೇರಿ ಒಟ್ಟು 5193 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಿದೆ. ಆಸಕ್ತ ಅಭ್ಯರ್ಥಿಗಳು ಏ.25ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ
No. of posts:  5193
Application Start Date:  14 ಎಪ್ರಿಲ್ 2018
Application End Date:  25 ಎಪ್ರಿಲ್ 2018
Work Location:  ಕರ್ನಾಟಕ ಸೇರಿದಂತೆ ದೇಶದಾದ್ಯಂತ
Qualification: ಹಿಂದಿ, ಇಂಗ್ಲಿಷ್‌, ಫಿಸಿಕ್ಸ್‌, ಕೆಮಿಸ್ಟ್ರಿ, ಮ್ಯಾಥ್ಸ್‌, ಬಯೋಲಜಿ, ಹಿಸ್ಟರಿ, ಜಿಯಾಗ್ರಫಿ, ಎಕನಾಮಿಕ್ಸ್‌ ವಿಷಯಗಳಲ್ಲಿ ಪಿಜಿಟಿಗಳ ನೇಮಕ ನಡೆದರೆ, ಹಿಂದಿ, ಇಂಗ್ಲಿಷ್‌, ಸಂಸ್ಕೃತ, ಸೈನ್ಸ್‌/ಬಯಾಲಜಿ, ಮ್ಯಾಥ್ಸ್‌ ಮತ್ತು ಸೋಷಿಯಲ್‌ ಸೈನ್ಸ್‌ ವಿಷಯಗಳಲ್ಲಿ ಟಿಜಿಟಿಗಳ ನೇಮಕ ನಡೆಯಲಿದೆ. ಉಪಪ್ರಾಂಶುಪಾಲರು, ಸ್ನಾತಕೋತ್ತರ ಪದವೀಧರ ಶಿಕ್ಷಕರು ಮತ್ತು ಪದವೀಧರ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ (ಸಂಬಂಧಪಟ್ಟ ವಿಷಯಗಳಲ್ಲಿ) ಮತ್ತು ಬಿಎಡ್‌ ವಿದ್ಯಾರ್ಹತೆ ಹೊಂದಿರಬೇಕು.

ಅನುಭವ ಕಡ್ಡಾಯ: ಉಪ ಪ್ರಾಂಶುಪಾಲರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಐದು ವರ್ಷಗಳ ಸೇವಾನುಭವ ಹೊಂದಿರಬೇಕು. ಪಿಜಿಟಿ ಅಭ್ಯರ್ಥಿಗಳು ಕೆವಿಎಸ್‌ಗಳಲ್ಲಿ ಐದು ವರ್ಷ ಟಿಜಿಟಿಗಳಾಗಿ ಕಾರ್ಯನಿರ್ವಹಿಸಿದ ಅನುಭವ ಪಡೆದಿರಬೇಕು. ಟಿಜಿಟಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಪಿಆರ್‌ಟಿಗಳಾಗಿ ಐದು ವರ್ಷ ಸೇವೆ ಸಲ್ಲಿಸಿರಬೇಕು. ಮುಖ್ಯ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೂಡ ಕೇಂದ್ರೀಯ ವಿದ್ಯಾಲಯಗಳಲ್ಲಿ ಐದು ವರ್ಷ ಪಿಆರ್‌ಟಿಗಳಾಗಿ ಕಾರ್ಯನಿರ್ವಹಿಸಿರಬೇಕು. ಆನ್‌ಲೈನ್‌ ಅರ್ಜಿಯ ಮುದ್ರಿತ ಪ್ರತಿಯನ್ನು ಮೇ 1ರೊಳಗೆ ಕಳುಹಿಸುವಂತೆ ಸೂಚಿಸಲಾಗಿದೆ.
for official notification

Comments