ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ನಾಗರೀಕ ವಿಮಾನಯಾನ ಸಚಿವಾಲಯದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ 90 ಗ್ರಾಜುವೇಟ್ ಅಪ್ರೆಂಟಿಸ್, ಡಿಪ್ಲೋಮ ಅಪ್ರೆಂಟಿಸ್ ಮತ್ತು ITI ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ : 90
Graduate Apprentice : 30
Diploma Apprentice : 30
ITI Trade Apprentice : 30
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುಲು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 26 ವರ್ಷ ವಯೋಮಿತಿಯನ್ನು ಮೀರಿರಬಾರದು.
SC/ST ಅಭ್ಯರ್ಥಿಗಳಿಗೆ 5 ವರ್ಷ
OBC ಅಭ್ಯರ್ಥಿಗಳಿಗೆ 3 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
Graduate Apprentice : 15000/-
Diploma Apprentice : 12000/-
ITI Trade Apprentice : 9000/-
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments