Loading..!

ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Published by: Tajabi Pathan | Date:27 ಡಿಸೆಂಬರ್ 2022
not found

ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ (ADA) ಯಲ್ಲಿ ಖಾಲಿ ಇರುವ ಸಹಾಯಕ ಹಾಗೂ ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 11-ಜನವರಿ-2023 ರೊಳಗಾಗಿ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ನಂತರ ಆನ್‌ಲೈನ್ ಅರ್ಜಿ ಪ್ರತಿ ಮತ್ತು ಅಗತ್ಯ ದಾಖಲೆಗಳನ್ನು 31-ಜನವರಿ -2023  ಕೆಳಗೆ ನೀಡಿರುವ ವಿಳಾಸಕ್ಕೆ ಸಲ್ಲಿಸಬಹುದಾಗಿರುತ್ತದೆ.  
ವಿಳಾಸ :
ಜಾಯಿಂಟ್ ಡೈರೆಕ್ಟರ್ (A&E), ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ ವಿಭೂತಿಪುರ,

ಮಾರತಹಳ್ಳಿ ಪೋಸ್ಟ್, ಬೆಂಗಳೂರು – 560037 

ಹುದ್ದೆಗಳ ವಿವರ : 14  

ಸಹಾಯಕ - 11
ಸ್ಟೆನೋಗ್ರಾಫರ್ - 3

No. of posts:  14
Application Start Date:  27 ಡಿಸೆಂಬರ್ 2022
Application End Date:  11 ಜನವರಿ 2023
Work Location:  ಕರ್ನಾಟಕ
Selection Procedure:

ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಯುವ ಅಭ್ಯರ್ಥಿಗಳು ಕಲೆ/ ವಾಣಿಜ್ಯ/ ವಿಜ್ಞಾನ/ ವ್ಯಾಪಾರ ಆಡಳಿತ/ ವ್ಯವಹಾರ ನಿರ್ವಹಣೆಯಲ್ಲಿ ಪದವಿ ಹಾಗೂ ಡಿಪ್ಲೊಮಾ ಇನ್ ಸೆಕ್ರೆಟರಿಯಲ್/ ಕಮರ್ಷಿಯಲ್ ಪ್ರಾಕ್ಟೀಸ್/ ಬಿಸಿನೆಸ್ ಅಡ್ಮಿನಿಸ್ಟ್ರೇಷನ್/ ಬಿಸಿನೆಸ್ ಮ್ಯಾನೇಜ್‌ಮೆಂಟ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Age Limit:

ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಗರಿಷ್ಠ ವಯಸ್ಸು 11-ಜನವರಿ-2023 ರಂತೆ 30 ವರ್ಷಗಳಾಗಿರಬೇಕು. 
ಮೀಸಲಾತಿ ವರ್ಗದವರಿಗೆ ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಕೆ ಇರಲಿದೆ. 

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 25500 /- ರಿಂದ 81100/- ರೂ ಗಳ ವರೆಗೆ ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments