Loading..!

ಬೆಂಗಳೂರಿನ ಏರೋನಾಟಿಕಲ್ ಡೆವಲಪ್ ಮೆಂಟ್ ಎಸ್ಟಾಬ್ಲಿಷ್ ಮೆಂಟ್ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ
Published by: Yallamma G | Date:6 ಮೇ 2022
not found

ಬೆಂಗಳೂರಿನ ಏರೋನಾಟಿಕಲ್ ಡೆವಲಪ್ ಮೆಂಟ್ ಎಸ್ಟಾಬ್ಲಿಷ್ ಮೆಂಟ್ (ADE-DRDO)ದಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಎರಡು ವರ್ಷದ ಅವಧಿಯ ವರೆಗೆ ನೇಮಕ ಮಡಿಕ್ಕೊಳಲಾಗುತ್ತದೆ. ಭಾರತೀಯ ಪ್ರಜೆಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ22/05/2022 ರೊಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.


ಹುದ್ದೆಗಳ ವಿವರ : 09
Electronics & Communication Engineering : 05
Aeronautical Engineering : 02
Mechanical Engineering : 02

No. of posts:  9
Application Start Date:  2 ಮೇ 2022
Application End Date:  22 ಮೇ 2022
Work Location:  ಬೆಂಗಳೂರು
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:

ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಅನುಗುಣವಾಗಿ BE/ BTech/ ME/ MTech  ಪದವಿವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ಗೇಟ್ ಪರೀಕ್ಷೆಯಲ್ಲಿ ಪಾಸಾದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಹೆಚ್ಚಿನ ವಿವರಕ್ಕಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 28 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 3 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

Pay Scale: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,000/- ರೂಗಳ ವರೆಗೆ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
To Download Official Notification

Comments