Loading..!

ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Published by: Bhagya R K | Date:13 ಎಪ್ರಿಲ್ 2023
not found

ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 495 ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್, ಜ್ಯೂನಿಯರ ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್ ಹಾಗೂ ಹ್ಯಾಂಡಿಮನ್ ಹುದ್ದೆಗಳನೊಳಗೊಂಡಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ  17 ಏಪ್ರಿಲ್ 2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
*ಈ ಹುದ್ದೆಗಳಿಗೆ ಏಪ್ರಿಲ್ 17 ರಿಂದ ಏಪ್ರಿಲ್ 21ರ  ವರೆಗೆ ಸಂದರ್ಶನ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 
ಸಂದರ್ಶನ ನೆಡೆಯುವ ಸ್ಥಳ :


Office of theHRDDepartment, AI Unity Complex,
PallavaramCantonment, Chennai -6000432


ಹುದ್ದೆಗಳ ವಿವರ : 495 
ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್ - 80 
ಜ್ಯೂನಿಯರ ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್ - 64 
ರಾಂಪ್ ಸರ್ವಿಸ್ ಎಕ್ಸಿಕ್ಯೂಟಿವ್ - 121 
ಹ್ಯಾಂಡಿಮನ್ - 230

No. of posts:  495
Application Start Date:  12 ಎಪ್ರಿಲ್ 2023
Application End Date:  17 ಎಪ್ರಿಲ್ 2023
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಆಯ್ಕೆ ಮಾಡಲಾಗುತ್ತದೆ.
* ಎಕ್ಸಿಕ್ಯೂಟಿವ್ ಹುದ್ದೆಗೆ ವ್ಯಯಕ್ತಿಕ ಸಂದರ್ಶನ, ಡ್ರೈವರ್ ಹುದ್ದೆಗೆ ವಾಹನ ಡ್ರೈವಿಂಗ್ ಪರೀಕ್ಷೆ, ಸ್ಕ್ರಿನಿಂಗ್ ಟೆಸ್ಟ್ ಹ್ಯಾಂಡಿ ಮನ್ ಹುದ್ದೆಗೆ ದ್ಯೆಹಿಕ ಸಹಿಷ್ಣುತೆ ಪರೀಕ್ಷೆ ಹಾಗೂ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು PUC/ ITI / ಡಿಪ್ಲೊಮಾ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 500/- ರೂ. ಅರ್ಜಿ ಶುಲ್ಕ ಪಾವತಿಸಬೇಕು.
ST/SC /ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 28 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ವಯೋಮಿತಿ ಸಡಿಲಿಕೆ :
SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
OBC ಅಭ್ಯರ್ಥಿಗಳಿಗೆ: 03 ವರ್ಷಗಳು ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗುವಂತೆ 23,640/- ರೂ ಗಳಿಂದ 25000/- ರೂ ಗಳವರೆಗೆ ಮಾಸಿಕ ವೇತನ  ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download the official notification

Comments

Manjunath Talawar ಏಪ್ರಿಲ್ 13, 2023, 11:13 ಪೂರ್ವಾಹ್ನ
User ಏಪ್ರಿಲ್ 15, 2023, 2:24 ಅಪರಾಹ್ನ