ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 208 ರಾಂಪ್ ಸೇವಾ ಕಾರ್ಯನಿರ್ವಾಹಕ, ಯುಟಿಲಿಟಿ ಏಜೆಂಟ್ ಮತ್ತು ರಾಂಪ್ ಡ್ರೈವರ್ ಮತ್ತು ಕೈಯಾಳು/ಕೈಗಾರ್ತಿಯರು ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ದೈಹಿಕ ಸಹಿಷ್ಣುತೆ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07 ಅಕ್ಟೋಬರ್ 2024 ರೊಳಗಾಗಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ.
ಹುದ್ದೆಗಳ ವಿವರ : 208
ರಾಂಪ್ ಸೇವಾ ಕಾರ್ಯನಿರ್ವಾಹಕ - 3
ಯುಟಿಲಿಟಿ ಏಜೆಂಟ್ ಮತ್ತು ರಾಂಪ್ ಡ್ರೈವರ್ - 4
ಕೈಯಾಳು/ಕೈಗಾರ್ತಿಯರು - 201
ಸಂದರ್ಶನದ ವಿಳಾಸ:
Sri Jagannath Auditorium, Near Vengoor Durga Devi Temple,
Vengoor, Angamaly, Ernakulam, Kerala, Pin – 683572
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 10 ನೇ, ITI, ಡಿಪ್ಲೊಮಾ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು
ಇತರೆ ಅಭ್ಯರ್ಥಿಗಳಿಗೆ 500/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಮಾಜಿ ಸೈನಿಕರು / ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 28 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 3 ವರ್ಷಗಳು
SC, ST ಅಭ್ಯರ್ಥಿಗಳಿಗೆ: 5 ವರ್ಷಗಳು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗುವಂತೆ18,840/- ರೂ ಗಳಿಂದ 24,960/- ರೂ ಗಳ ವರೆಗೆ ಮಾಸಿಕ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments