ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 145 ಆಫೀಸರ್ ಮತ್ತು ಜೂನಿಯರ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳನ್ನು 3 ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ದೈಹಿಕ ಸಹಿಷ್ಣುತೆ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 06, 07 ಮತ್ತು 08 ಜನವರಿ 2025 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾದ ಅಧಿಕೃತ ಅಧಿಸೂಚನೆಯ ಮೂಲಕ ಪಡೆಯಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
Mumbai :AI Airport Services Limited,
GSD Complex, CSMI Airport,
Near CISF Gate No.5,
Sahar, Andheri East,
Mumbai -400099
ಹುದ್ದೆಗಳ ವಿವರ : 145
Officer (Security) : 65
Junior Officer (Security) : 80
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು
ಇತರೆ ಅಭ್ಯರ್ಥಿಗಳಿಗೆ 500/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಮಾಜಿ ಸೈನಿಕರು / ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 50 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 3 ವರ್ಷಗಳು
SC, ST ಅಭ್ಯರ್ಥಿಗಳಿಗೆ: 5 ವರ್ಷಗಳು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗುವಂತೆ ಈ ಕೆಳಗಿನಂತೆ ಮಾಸಿಕ ವೇತನ ನೀಡಲಾಗುತ್ತದೆ.
- Officer (Security) Rs.45000/-
- Junior Officer (Security) Rs.29760/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments