ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ

ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 283 ಸಹಾಯಕ ಮೇಲ್ವಿಚಾರಕರು ಮತ್ತು ಗ್ರಾಜುವೇಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15/01/2024.ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 283
1. Assistant Supervisor 209
2. Graduate Engineer (Trainee) 74
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕನಿಷ್ಟ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
ಸಾಮಾನ್ಯ ಅನ್ಯಾರ್ಥಿಗಳು : 35 ವರ್ಷ
SC/ST ಅಭ್ಯರ್ಥಿಗಳು: 40 ವರ್ಷಗಳ
OBC ಅಭ್ಯರ್ಥಿಗಳು: 38 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.
- ಸಹಾಯಕ ಮೇಲ್ವಿಚಾರಕರು ಹುದ್ದೆಗಳಿಗೆ : 27000/-
- ಗ್ರಾಜುವೇಟ್ ಇಂಜಿನಿಯರ್ ಹುದ್ದೆಗಳಿಗೆ : 29000-79000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments