ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ

ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ವಿಮಾನ ತಂತ್ರಜ್ಞ, ನುರಿತ ಸಸ್ಯ ತಂತ್ರಜ್ಞ ಹಾಗೂ ನುರಿತ ತಂತ್ರಜ್ಞ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20 ಮಾರ್ಚ್ 2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 36
ವಿಮಾನ ತಂತ್ರಜ್ಞ (B1) - 23
ವಿಮಾನ ತಂತ್ರಜ್ಞ (B2) - 9
ನುರಿತ ಸಸ್ಯ ತಂತ್ರಜ್ಞ (ಮೆಕ್ಯಾನಿಕಲ್) - 2
ನುರಿತ ಸಸ್ಯ ತಂತ್ರಜ್ಞ (ಎಲೆಕ್ಟ್ರಿಕಲ್) - 1
ನುರಿತ ತಂತ್ರಜ್ಞ (ಪೇಂಟರ್) - 1
* ಅಭ್ಯರ್ಥಿಗಳು ಸಂದರ್ಶನದ ಸ್ಥಳ ಹಾಗೂ ದಿನಾಂಕದ ಸಂಪೂರ್ಣ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸ್ಕ್ರೀನಿಂಗ್, ತಾಂತ್ರಿಕ ಮೌಲ್ಯಮಾಪನ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC /ಡಿಪ್ಲೊಮಾ / ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SC/ST/ಮಾಜಿ ಸೈನಿಕ ಅಭ್ಯರ್ಥಿಗಳು: 500/- ರೂ.
ಸಾಮಾನ್ಯ / EWS/ OBC ಅಭ್ಯರ್ಥಿಗಳು: 1000/-ರೂ. ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸುವದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು 01-ಮಾರ್ಚ್-2023 ರಂತೆ ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
SC/ST ಅಭ್ಯರ್ಥಿಗಳು: 05 ವರ್ಷಗಳು
OBC ಅಭ್ಯರ್ಥಿಗಳು: 03 ವರ್ಷಗಳು ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 25000/- ರೂ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments