ಭಾರತ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯ ಅಧೀನದ ವಿವಿಧ ಅರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ 487 ಹುದ್ದೆಗಳ ನೇರ ನೇಮಕಾತಿ

ಭಾರತ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯ ಅಧೀನದ ವಿವಿಧ ಅರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ 487 ರಿಸರ್ಚ್ ಅಸಿಸ್ಟಂಟ್, ಟೆಕ್ನಿಷನ್, ಲ್ಯಾಬೊರೇಟರಿ ಅಟೆಂಡೆಂಟ್, ಫೀಲ್ಡ್ ವರ್ಕರ್, ಲೈಬ್ರರಿ ಕ್ಲರ್ಕ್, ನರ್ಸಿಂಗ್ ಆಫೀಸರ್ ಮತ್ತು ಕುಕ್ ಸೇರಿದಂತೆ ವಿವಿಧ ಹುದ್ದೆಯನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ನವೆಂಬರ್ 30 2023.ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ದರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ ಮತ್ತು ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 600/-
* SC/ST/ PWBD/ CAT-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರವಾಗಿ ಮಾಸಿಕ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments