ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ (AIIMS) ಯಲ್ಲಿ ಖಾಲಿ ಇರುವ 3055 ನರ್ಸ್ ಹುದ್ದೆಗಳ ಭರ್ಜರಿ ನೇಮಕಾತಿ

ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ (AIIMS)ಯಲ್ಲಿ ಖಾಲಿ ಇರುವ 3055 ನರ್ಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 05 ಮೇ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು Diploma (GNM)/ B.Sc Nursing/ Post-Basic B.Sc Nursing ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
OBC ಹಾಗೂ ಸಾಮಾನ್ಯ ಅಭ್ಯರ್ಥಿಗಳು 3000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ ST ಅಭ್ಯರ್ಥಿಗಳು 2400/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ವಯೋಮಿತಿಯಲ್ಲಿ ಸಡಿಲಿಕೆ :
SC/ST ಅಭ್ಯರ್ಥಿಗಳಿಗೆ 5 ವರ್ಷ
OBC ಅಭ್ಯರ್ಥಿಗಳಿಗೆ 3 ವರ್ಷ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ ನಿಯಮಾನುಸಾರದಂತೆ ಮಾಸಿಕ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments