ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ (AIIMS) ಬಿಬಿನಗರನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ ಬಿಬಿನಗರ (AIIMS)ದಲ್ಲಿ ಖಾಲಿ ಇರುವ 191 ಸೀನಿಯರ್ ರೆಸಿಡೆಂಟ್ಸ್ ಮತ್ತು ಸೀನಿಯರ್ ರೆಸಿಡೆಂಟ್ಸ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 19 ಡಿಸೆಂಬರ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 191
ಸೀನಿಯರ್ ರೆಸಿಡೆಂಟ್ಸ್ - 151
ಜೂನಿಯರ್ ರೆಸಿಡೆಂಟ್ಸ್ - 40
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು
ಜೂನಿಯರ್ ರೆಸಿಡೆಂಟ್ಸ್ ಹುದ್ದೆಗಳಿಗೆ ಮೆರಿಟ್ ಲಿಸ್ಟ್ ಆಧಾರದ ಮೇಲೆ ಹಾಗೂ ಸೀನಿಯರ್ ರೆಸಿಡೆಂಟ್ಸ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು M.D/ M.S/ DNB/ DM / M.ch /MBBSವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲದಿಂದ ಪದವಿಯನ್ನು ಪೂರ್ಣಗೊಳಿಸಿರುವವರು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಜೂನಿಯರ್ ರೆಸಿಡೆಂಟ್ಸ್ ಹುದ್ದೆಗಳಿಗೆ OBC ಹಾಗೂ ಸಾಮಾನ್ಯ ಅಭ್ಯರ್ಥಿಗಳು 1180/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
EWS ಅಭ್ಯರ್ಥಿಗಳು 944/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ ST/ PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.
ಸೀನಿಯರ್ ರೆಸಿಡೆಂಟ್ಸ್ ಹುದ್ದೆಗಳಿಗೆ OBC ಹಾಗೂ ಸಾಮಾನ್ಯ ಅಭ್ಯರ್ಥಿಗಳು 1770/- ರೂ ಅರ್ಜಿ ಶುಲ್ಕ
EWS ಅಭ್ಯರ್ಥಿಗಳು 1416/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ ST/ PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು
ಜೂನಿಯರ್ ರೆಸಿಡೆಂಟ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 37 ವರ್ಷ ವಯೋಮಿತಿಯನ್ನು ಮೀರಿರಬಾರದು.
ಸೀನಿಯರ್ ರೆಸಿಡೆಂಟ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು.
* OBC ಅಭ್ಯರ್ಥಿಗಳಿಗೆ 3 ವರ್ಷ
* SC/ST/ ಅಭ್ಯರ್ಥಿಗಳಿಗೆ 5 ವರ್ಷ
* PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ ನಿಯಮಾನುಸಾರದಂತೆ ಮಾಸಿಕ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
ಸೀನಿಯರ್ ರೆಸಿಡೆಂಟ್ಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ :
ಜೂನಿಯರ್ ರೆಸಿಡೆಂಟ್ಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ :





Comments