ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ (AIIMS) ಮಂಗಳಗಿರಿಯ ವೈದ್ಯಕೀಯ ಕ್ಷೇತ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ (AIIMS) ಮಂಗಳಗಿರಿಯ ವೈದ್ಯಕೀಯ ಕ್ಷೇತ್ರದಲ್ಲಿ ಖಾಲಿ ಇರುವ 125 ಪ್ರೊಫೆಸರ್, ಅಡಿಷನಲ್ ಪ್ರೊಫೆಸರ್ ಮತ್ತು ಅಸೋಸಿಯೇಟ್ ಪ್ರೊಫೆಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 07 ಜನೆವರಿ 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 17 ಜನೆವರಿ 2024 ರೊಳಗಾಗಿ ಅಪ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 125
ಪ್ರೊಫೆಸರ್ - 20
ಅಡಿಷನಲ್ ಪ್ರೊಫೆಸರ್ - 10
ಅಸೋಸಿಯೇಟ್ ಪ್ರೊಫೆಸರ್ - 22
ಅಸಿಸ್ಟೆಂಟ್ ಪ್ರೊಫೆಸರ್ - 73
ಅರ್ಜಿ ಸಲ್ಲಿಸುವ ವಿಳಾಸ :
Faculty In-charge,
Recruitment Cell,
Room No: 216, 2nd Floor,
Library & Admin Building,
AIIMS, Mangalagiri, Guntur,
Andhra Pradesh, Pin – 522 503
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸಂದರ್ಶದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು M.D/ M.S/ DNB/ DM / M.ch /MBBSವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲದಿಂದ ಪದವಿಯನ್ನು ಪೂರ್ಣಗೊಳಿಸಿರುವವರು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
UR/EWS/OBC ಅಭ್ಯರ್ಥಿಗಳಿಗೆ 3100/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ ST/ ಅಭ್ಯರ್ಥಿಗಳಿಗೆ 2100/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಗರಿಷ್ಠ 58 ವರ್ಷ ವಯೋಮಿತಿಯನ್ನು ಮೀರಿರಬಾರದು.
ಅಸಿಸ್ಟೆಂಟ್ & ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್ ಈ ಹುದ್ದೆಗಳಿಗೆ 50 ವರ್ಷ
ಅಡಿಷನಲ್ ಪ್ರೊಫೆಸರ್ & ಪ್ರೊಫೆಸರ್ ಈ ಹುದ್ದೆಗಳಿಗೆ 58 ವರ್ಷ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ ನಿಯಮಾನುಸಾರದಂತೆ ಮಾಸಿಕ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments