ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ (AIIMS) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ (AIIMS) ಯಲ್ಲಿ ಖಾಲಿ ಇರುವ4576 ನರ್ಸಿಂಗ್ ಅಧಿಕಾರಿ, ಚಾಲಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಆನ್‌ಲೈನ್ (CBT) ಪರೀಕ್ಷೆ , ದಾಖಲೆ ಪರಿಶೀಲನೆ, ಕೌಶಲ್ಯ ಪರೀಕ್ಷೆ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ31 ಜನವರಿ 2025 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC, PUC, ITI,ಡಿಪ್ಲೊಮಾ, D.Pharm, B.Pharm, PT, B.Th, BPTh, B.Sc, BE/ B.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲದಿಂದ ಪದವಿಯನ್ನು ಪೂರ್ಣಗೊಳಿಸಿರುವವರು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಸಾಮಾನ್ಯ/OBC ಅಭ್ಯರ್ಥಿಗಳಿಗೆ 3000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ ST/ EWS ಅಭ್ಯರ್ಥಿಗಳಿಗೆ 2400/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 3 ವರ್ಷಗಳು
SC, ST ಅಭ್ಯರ್ಥಿಗಳು: 5 ವರ್ಷಗಳು
PWBD ಅಭ್ಯರ್ಥಿಗಳು: 10 ವರ್ಷಗಳು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 19,900/- ರೂ ಗಳಿಂದ 92,300/- ರೂ ಗಳ ವರೆಗೆ ಮಾಸಿಕ ವೇತನ ನೀಡಲಾಗುವುದು.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.





Comments