ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ, ಮೈಸೂರು ದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ, ಮೈಸೂರಿನಲ್ಲಿ ನಿಯಮಿತ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ಭರ್ತಿ ಮಾಡಿಕೋಳ್ಳಲು ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ಸಂಪೂರ್ಣ ವಿವರ ಅರ್ಜಿ ಶುಲ್ಕ ಮತ್ತು ದಾಖಲೆಗಳೊಂದಿಗೆ ದಿನಾಂಕ: 17-12-2021 ರ ಒಳಗಾಗಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿಗಳನ್ನು ಕಳುಹಿಸುವ ವಿಳಾಸ:
ಮುಖ್ಯ ಆಡಳಿತಾಧಿಕಾರಿಗಳ ಕಛೇರಿ,
ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ,
ಮಾನಸಗಂಗೋತ್ರಿ, ಮೈಸೂರು - 570 006.
ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹೊಂದಿರಬೇಕಾದ ವಿದ್ಯಾರ್ಹತೆ ಈ ಕೆಳಗಿನಂತಿವೆ.
1) ಡೀನ್ ಹುದ್ದೆಗೆ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.
2) ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ M.Sc Nursing / B.Sc Nursing ಉತ್ತೀರ್ಣರಾಗಿರಬೇಕು.
3) ಆಡಿಯಾಲಜಿಸ್ಟ್/ಸ್ಪೀಚ್ ಲ್ಯಾಂಗ್ವೇಜ್ ಪೆಥಾಲಜಿಸ್ಟ್ ಗ್ರೇಡ್ || ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಾಕ್ ಮತ್ತು ಶ್ರವಣದಲ್ಲಿ ಬಿ.ಎಸ್ಸಿ ಪದವಿ ಹೊಂದಿರಬೇಕು.
4) ಲೈಬ್ರರಿ ಮತ್ತು ಇನ್ಫರ್ಮೇಷನ್ ಅಸಿಸ್ಟೆಂಟ್ ಹುದ್ದೆಗೆ ಗ್ರಂಥಾಲಯ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
5) ಮೆಡಿಕಲ್ ರೆಕಾರ್ಡ್ಸ್ ಟೆಕ್ನಿಷಿಯನ್ ಹುದ್ದೆಗೆ ವೈದ್ಯಕೀಯ ದಾಖಲೆಗಳ ಕೀಪಿಂಗ್‌ನಲ್ಲಿ ಡಿಪ್ಲೊಮಾ ಪದವಿ ಹೊಂದಿರಬೇಕು
6) ಅಸಿಸ್ಟೆಂಟ್ ಗ್ರೇಡ್ || ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು
7) ಮಲ್ಟಿ ರಿಹ್ಯಾಬಿಲಿಟೇಶನ್ ವರ್ಕರ್ ಪಿ.ಯು.ಸಿ / ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು
ಸಾಮಾನ್ಯ ವರ್ಗ, OBC ಮತ್ತು EWS ಅಭ್ಯರ್ಥಿಗಳಿಗೆ ರೂ.100/-
SC/ST ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ರೂ.40/-
ಮಹಿಳೆಯರಿಗೆ ಮತ್ತು PWD ಅಭ್ಯರ್ಥಿಗಳಿಗೆ - ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments