ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ, ಮೈಸೂರು ಇಲ್ಲಿ ಖಾಲಿ ಇರುವ ಸಂಶೋಧನಾ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕದ ಮೈಸೂರಿನಲ್ಲಿರುವ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ, ಇಲ್ಲಿ ಖಾಲಿ ಇರುವ ಒಟ್ಟು 05 ಸಂಶೋಧನಾ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ: 05
* Junior Research Officer - 01
* Research Officer - 04
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ https://aiishmysore.in/en/ ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ 07/02/2022 ರ ಸಂಜೆ 5:30ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ. ಅರ್ಜಿಯನ್ನು ಕಳುಹಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.
ಅರ್ಜಿ ಸಲ್ಲಿಸುವ ವಿಳಾಸ: ಮುಖ್ಯ ಆಡಳಿತಾಧಿಕಾರಿ, ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ, ಮಾನಸಗಂಗೋತ್ರಿ, ಮೈಸೂರು-570006
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು M.Sc ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
* ಜೊತೆಗೆ ಕನ್ನಡ ಮತ್ತು ಇಂಗ್ಲೀಷ್ ಓದಲು ಮತ್ತು ಟೈಪ್ ಮಾಡಲು ಬರುವಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ, ಓಬಿಸಿ ಮತ್ತು ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 100/-ರೂ ಮತ್ತು
* ಪ.ಜಾ/ಪ.ಪಂ ಅಭ್ಯರ್ಥಿಗಳು 40/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.
- ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗಳಿಗನುಸಾರ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 30,000/- ರಿಂದ 39,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments