ಮೈಸೂರು ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಮೈಸೂರಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ 22 ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ. ಜನ್ಮ ದಿನಾಂಕ, ಕಾರ್ಯಾನುಭವ, ವಿದ್ಯಾರ್ಹತೆ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಧೃಡೀಕರಿಸಿ, ಅರ್ಜಿಯೊಂದಿಗೆ ಲಗತ್ತಿಸಿ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 05/11/2024. ಅಭ್ಯರ್ಥಿಗಳು ಅರ್ಜಿಯನ್ನು ಆಫ್ ಲೈನ್ ಮೂಲಕ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ :
The Chief Administrative Officer,
Office of the Chief Administrative Officer,
All India Institute of Speech and Hearing,
Manasagangothri, Mysore-570006.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುವುದು .
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments