ಮೈಸೂರಿನಲ್ಲಿರುವ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ ಇಲ್ಲಿ ಖಾಲಿ ಇರುವ 9 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Hanamant Katteppanavar | Date:29 ಡಿಸೆಂಬರ್ 2020

ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಕೆಲಸ ಮಾಡುತ್ತಿರುವ ಹಾಗೂ ಕರ್ನಾಟಕ ರಾಜ್ಯದ ಮೈಸೂರು ನಗರದಲ್ಲಿರುವ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯು ವಾಕ್ ಮತ್ತು ಶ್ರವಣ ದೋಷಗಳ ಅಖಿಲ ಭಾರತ ಮಟ್ಟದ ಚಿಕಿತ್ಸಾ ಕೇಂದ್ರವಾಗಿದೆ. ಪ್ರಸ್ತುತ ಈ ಸಂಸ್ಥೆಯಲ್ಲಿ ಖಾಲಿ ಇರುವ 9 ಪ್ರೊಫೆಸರ್, ಅಧಿಕಾರಿ, ಕಾಗ್ನಿಟಿವ್ ಸೈಕಾಲಜಿಸ್ಟ್ ಮತ್ತು ಇಲೆಕ್ಟ್ರಿಶಿಯನ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ ಜನವರಿ 18, 2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts: 9
Application End Date: 18 ಜನವರಿ 2021
Work Location: ಮೈಸೂರು, ಕರ್ನಾಟಕ
Selection Procedure:
- ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು, ಹಾಗೂ ಅವಶ್ಯವಿದ್ದಲ್ಲಿ ಲಿಖಿತ ಕೌಶಲ್ಯ ಪರೀಕ್ಷೆ ಪ್ರಾಯೋಗಿಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification: - ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ಡಿಪ್ಲೋಮಾ, ಐಟಿಐ, ಪದವಿ, ಎಂ.ಎಸ್ಸಿ, ಎಂ.ಎ, ಪಿಹೆಚ್‌ಡಿ ಮತ್ತು ಎಂ.ಫಿಲ್ ವಿದ್ಯಾರ್ಹತೆಯನ್ನು ಮತ್ತು ಸೇವಾನುಭವ ಹೊಂದಿರಬೇಕು.
Fee:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳು - 100/-ರೂ ಮತ್ತು,
ಪ.ಜಾ, ಪ.ಪಂ ಮತ್ತು ಅಂಗವಿಕಲ ಅಭ್ಯರ್ಥಿಗಳು- 40/- ರೂ ಗಳ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕು.
* ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯಾದ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.
Age Limit: - ಅಭ್ಯರ್ಥಿಗಳು ಕನಿಷ್ಠ- 27 ವರ್ಷಗಳ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಆಯಾ ಹುದ್ದೆಗಳಿಗೆ ಸಂಬಂಧಿಸಿದಂತೆ ಗರಿಷ್ಠ- 30, 50 ಮತ್ತು 56 ವರ್ಷ ವಯೋಮಿತಿಯನ್ನು ಮೀರಿರಬಾರದು.
Pay Scale:
- ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದ್ದು, ಈ ಕುರಿತು ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಗಮನಿಸಬಹುದು.
- ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಪೂರ್ಣವಾಗಿ ಭರ್ತಿ ಮಾಡಿ ಅಗತ್ಯ ಮೂಲ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಜನವರಿ 18, 2021 ರೊಳಗೆ ತಲುಪುವಂತೆ ಅರ್ಜಿಯನ್ನು ತಲುಪಿಸಬೇಕು.
ಅರ್ಜಿಯನ್ನ ಕಳುಹಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ಬರೆಯತಕ್ಕದ್ದು.
* ಕಚೇರಿಯ ವಿಳಾಸ:
ಮುಖ್ಯ ಆಡಳಿತಾಧಿಕಾರಿ, ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ, ಮಾನಸಗಂಗೋತ್ರಿ, ಮೈಸೂರು-570006





Comments