ಏರ್ ಇಂಡಿಯಾ ಏರ್ ಪೋರ್ಟ್ ಸರ್ವೀಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಏರ್ ಇಂಡಿಯಾ ಏರ್ ಪೋರ್ಟ್ ಸರ್ವೀಸ್ ಲಿಮಿಟೆಡ್ ನ ದಕ್ಷಿಣ ವಲಯದ ವಿಜಯವಾಡ ಅಂತರಾಷ್ಟ್ರಿಯ ವಿಮಾನ ನಿಲ್ದಾಣದಲ್ಲಿ ಖಾಲಿ ಇರುವ 45 ಕಸ್ಟಮರ್ ಏಜೆಂಟ್ ಮತ್ತು ಹ್ಯಾಂಡಿಮ್ಯಾನ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.
ಹುದ್ದೆಗಳ ವಿವರ: 45
* Customer Agent - 08
* Junior Customer Agent : 04
* Ramp Service Agent : 02
* Utility Agent cum Ramp Driver : 06
* Handyman - 25
ಅರ್ಜಿ ಸಲ್ಲಿಸಬೇಕಾದ ವಿಳಾಸ :
HR Department,
AI AirportServices Limited, AI Unity Complex,
PallavaramCantonment, Chennai - 600043
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 28 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 31 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 33 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ರೂ.14,160/- ರಿಂದ 19,350/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments