ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ)ದಲ್ಲಿ ಖಾಲಿ ಇರುವ 364 ಮ್ಯಾನೇಜರ್, ಜೂನಿಯರ್ ಎಕ್ಸಿಕ್ಯುಟಿವ್ ಮತ್ತು ಸೀನಿಯರ್ ಅಸಿಸ್ಟೆಂಟ್ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಭಾರತೀಯ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 21/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 364
- ಮ್ಯಾನೇಜರ್ : 02
- ಜೂನಿಯರ್ ಎಸ್ಎಕ್ಯುಟಿವ್ : 360
- ಸೀನಿಯರ್ ಅಸಿಸ್ಟೆಂಟ್ : 02
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳುEngineering/ B.Sc/ ಸ್ನಾತಕೋತ್ತರ ಪದವಿ ಮತ್ತು ಪದವಿಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ
- PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 60,000/- ರಿಂದ 1,10,000/- ರೂಗಳ ವರೆಗೆ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments