Loading..!

ಏರ್‌ಪೋರ್ಟ್‌ ಅಥಾರಿಟಿಯಲ್ಲಿ ಖಾಲಿ ಇರುವ 400 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Savita Halli | Date:9 ಜೂನ್ 2022
not found

ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ 400 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 14/07/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

ಪ್ರಮುಖ ದಿನಾಂಕಗಳು:
* ಅರ್ಜಿ ಸಲ್ಲಿಸಲು ಪ್ರಾರಂಭ: 15/06/2022
* ಅರ್ಜಿ ಸಲ್ಲಿಸಲು ಕೊನೆಯ ದಿನ: 14/07/2022

No. of posts:  400
Application Start Date:  15 ಜೂನ್ 2022
Application End Date:  14 ಜುಲೈ 2022
Work Location:  ಭಾರತದಾಧ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್‌ ಪರೀಕ್ಷೆ ನಡೆಸಲಾಗುವುದು ಮತ್ತು ಆನ್‌ಲೈನ್ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ದಾಖಲೆ ಪರಿಶೀಲನೆ, ಸoದರ್ಶನ, ಧ್ವನಿ ಹಾಗೂ ಅಭ್ಯರ್ಥಿಗಳ ಹಿನ್ನೆಲೆ ಪರೀಕ್ಷೆಗಳನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳುB.Sc ಹಾಗೂ ಇಂಜಿನಿಯರಿಂಗ್ ಪದವಿಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.

Fee:

 ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 
* SC/ ST ಹಾಗೂ ಮಹಿಳಾ ಅಭ್ಯರ್ಥಿಗಳು 81 ರೂ. 
* ಇತರ ಅಭ್ಯರ್ಥಿಗಳು 1000 ರೂ. ಅನ್ನು ಅನ್‌ಲೈನ್‌ ಮೂಲಕ ಪಾವತಿಸಬೇಕು.
* AAI ನಲ್ಲಿ ಆಫ್ರೆಂಟಿಸ್ ತರಬೇತಿ ಪಡೆದ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 14/07/2022 ರ ಅನ್ವಯ ಗರಿಷ್ಠ 27 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 40,000/-ರೂ ಗಳ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ. 
ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments