ಪರಮಾಣು ಖನಿಜಗಳ ಅನ್ವೇಷಣೆ ಮತ್ತು ಸಂಶೋಧನಾ ನಿರ್ದೇಶನಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Tajabi Pathan | Date:29 ಅಕ್ಟೋಬರ್ 2022

ಪರಮಾಣು ಖನಿಜಗಳ ಅನ್ವೇಷಣೆ ಮತ್ತು ಸಂಶೋಧನಾ ನಿರ್ದೇಶನಾಲಯದಲ್ಲಿ ಖಾಲಿ ಇರುವ ಕಿರಿಯ ಭಾಷಾಂತರ ಅಧಿಕಾರಿ, ಸಹಾಯಕ ಭದ್ರತಾ ಅಧಿಕಾರಿ, ಭದ್ರತಾ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ದಿನಾಂಕ 17 ನವೆಂಬರ್ 2022 ರೊಳಗಾಗಿ ಅರ್ಜಿ ಸಲ್ಲಿಸತಕ್ಕದ್ದು.
ಹುದ್ದೆಗಳ ವಿವರ :
- ಕಿರಿಯ ಭಾಷಾಂತರ ಅಧಿಕಾರಿ - 9
- ಸಹಾಯಕ ಭದ್ರತಾ ಅಧಿಕಾರಿ - 38
- ಭದ್ರತಾ ಸಿಬ್ಬಂದಿ - 274
No. of posts: 321
Application Start Date: 29 ಅಕ್ಟೋಬರ್ 2022
Application End Date: 7 ನವೆಂಬರ್ 2022
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ SSLC/ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ಸೆಕ್ಯುರಿಟಿ ಗಾರ್ಡ್ ಹುದ್ದೆಗಳು: ರೂ.100/- , ಕಿರಿಯ ಭಾಷಾಂತರ ಅಧಿಕಾರಿ, ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗಳು: ರೂ.200/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST/ಮಾಜಿ ಸೈನಿಕರು/PWD ಮತ್ತು ಮಹಿಳಾ ಅಭರ್ತಿಗಳಿಗೆ ಯಾವದೇ ಶುಲ್ಕ ಇರುವದಿಲ್ಲ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 18 ರಿಂದ 25 ವರ್ಷ ವಯಸ್ಸು ಮೀರಿರಬಾರದು, ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
- OBC ಅಭ್ಯರ್ಥಿಗಳು: 03 ವರ್ಷಗಳು
- SC/ST ಅಭ್ಯರ್ಥಿಗಳು: 05 ವರ್ಷಗಳು
- PwD ಅಭ್ಯರ್ಥಿಗಳು: 10 ವರ್ಷಗಳು
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ: ರೂ.18000-35400/- ನಿಗದಿ ಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments