ಅಂಚೆ ಪಾವತಿ ಬ್ಯಾಂಕ್ ನಲ್ಲಿ ಖಾಲಿ ಇರುವ 650 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿಸಲ್ಲಿಸಿ

ಕೇಂದ್ರ ಸರ್ಕಾರದ ಸಂವಹನ ಸಚಿವಾಲಯದಡಿ ಕಾರ್ಯನಿರ್ವಹಿಸುವ ಭಾರತೀಯ ಅಂಚೆ ಪಾವತಿ ಬ್ಯಾಂಕ್(IPPB) ನಲ್ಲಿ ಗ್ರಾಮೀಣ ಡಾಕ್ ಸೇವಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದಾದ್ಯಂತ ಒಟ್ಟು 650 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. 2 ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20/05/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕದಲ್ಲಿ ಒಟ್ಟು 42 ಹುದ್ದೆಗಳಿಗೆ ನೇಮಕ ನಡೆಯಲಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಭಾಷಾ ಪ್ರಾವಿಣ್ಯ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
- 2 ವರ್ಷ ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 700/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ 30/04/2022ರ ಅನ್ವಯ ಕನಿಷ್ಠ 20 ವರ್ಷ ಹಾಗೂ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 30,000/- ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments