Loading..!

ಚಿಕ್ಕಮಗಳೂರು ಜಿಲ್ಲೆಯಲ್ಲಿ 64 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
| Date:25 ಫೆಬ್ರುವರಿ 2019
not found
ಚಿಕ್ಕಮಗಳೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಸದರಿ ಹುದ್ದೆಗಳು ಚಿಕ್ಕಮಗಳೂರು ಜಿಲ್ಲೆಯಲ್ಲಿ ಖಾಲಿ ಇದ್ದು ಅಲ್ಲಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಮಾರ್ಚ್ 22.2019ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಚಿಕ್ಕಮಗಳೂರು ಜಿಲ್ಲೆಯ 7ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ15 ಅಂಗನವಾಡಿ ಕಾರ್ಯಕರ್ತೆ ಮತ್ತು 49 ಅಂಗನವಾಡಿ ಸಹಾಯಕಿ ಹುದ್ದೆ ಸೇರಿದಂತೆ ಒಟ್ಟು 64 ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
No. of posts:  64
Application Start Date:  22 ಫೆಬ್ರುವರಿ 2019
Application End Date:  22 ಮಾರ್ಚ್ 2019
Selection Procedure: ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ/ ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3ವ‍ರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
Qualification: ಅಂಗನವಾಡಿ ಕಾರ್ಯಕರ್ತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.

ಅಂಗನವಾಡಿ ಸಹಾಯಕಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ.( 9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)
Age Limit: ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಈ ಕುರಿತ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
to download official notification
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments