ಆರ್ಮಿ ಆರ್ಡಿನೆನ್ಸ್ ಕಾರ್ಪ್ಸ್ (AOC) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ರಕ್ಷಣಾ ಸಚಿವಾಲಯದ ಅಡಿಯಲ್ಲಿ ಆರ್ಮಿ ಆರ್ಡನೆನ್ಸ್ ಕಾರ್ಪ್ಸ್ (AOC) ಇಲಾಖೆಯಲ್ಲಿ ಖಾಲಿ ಇರುವ723 ಮೆಟೀರಿಯಲ್ ಅಸಿಸ್ಟೆಂಟ್, ಜೂನಿಯರ್ ಆಫೀಸ್ ಅಸಿಸ್ಟೆಂಟ್ (JOA), ಸಿವಿಲ್ ಮೋಟಾರ್ ಡ್ರೈವರ್ (OG), ಟೆಲಿ ಆಪರೇಟರ್ ಗ್ರೇಡ್-II ಮತ್ತು ಫೈರ್ ಮ್ಯಾನ್ ಸೇರಿದಂತೆ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 22 ಡಿಸೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 723
Material Assistant (MA) - 9
Junior Office Assistant (JOA) - 27
Civil Motor Driver (OG) - 04
Tele Operator Grade-II - 14
Fireman - 247
Carpenter & Joiner - 07
Painter & Decorator - 05
MTS (Multi-Tasking Staff) - 11
Tradesman Mate - 389
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC/ PUC/ Diploma ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ವಯೋಮಿತಿಗಳನ್ನು ಮೀರಿರಬಾರದು.'
ವಯೋಮಿತಿ ಸಡಿಲಿಕೆ:
SC/ST/Cat-1 ಅಭ್ಯರ್ಥಿಗಳಿಗೆ: 05 ವರ್ಷಗಳು
2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷಗಳು
PWD ಅಭ್ಯರ್ಥಿಗಳಿಗೆ: 10 ವರ್ಷಗಳು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 18,000/- ರೂ ಗಳಿಂದ 92,300/- ರೂಗಳವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments