ಅಪೆಕ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅಪೆಕ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ 2,254 ಕ್ಲರ್ಕ್ ಮತ್ತು ಮ್ಯಾನೇಜರ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 25/12/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : ಒಟ್ಟು 2,254
ಭಾರತದಾದ್ಯಂತ ಬ್ಯಾಂಕ್ ಅಸಿಸ್ಟೆಂಟ್ (ಕ್ಲರ್ಕ್) ಹುದ್ದೆಗಳು : 896
ಮಧ್ಯ ಪ್ರದೇಶ ರಾಜ್ಯದಲ್ಲಿ ಮ್ಯಾನೇಜರ್ ಹುದ್ದೆಗಳು : 1,358
ಅಪೆಕ್ಸ್ ಬ್ಯಾಂಕ್ ಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕ್ಲರ್ಕ್ ಹುದ್ದೆಗಳಿಗೆ ಯಾವುದೇ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಮ್ಯಾನೇಜರ್ ಹುದ್ದೆಗಳಿಗೆ B.E.(CSE/I.T.)/ M.C.A./B.C.A./ M.Sc.(I.T./C.S.)/ B.Sc..(I.T./C.S.)/ M.Tech./M.E.(IT/CS) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2A, 2B, 3A, 3B, ಸಾಮಾನ್ಯ ಅಭ್ಯರ್ಥಿಗಳು: 1000/- ಅರ್ಜಿ ಶುಲ್ಕವನ್ನು ಪಾವತಿಸಬೇಕು ಹಾಗೂ SC/ST ಅಭ್ಯರ್ಥಿಗಳು: 500/- ಪಾವತಿಸತಕ್ಕದ್ದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
2A, 2B, 3A & 3B ಅಭ್ಯರ್ಥಿಗಳು: 03 ವರ್ಷಗಳು
SC, ST ಅಭ್ಯರ್ಥಿಗಳು: 05 ವರ್ಷಗಳು ವಯೋಮಿತಿ ಸಡಿಲಿಕೆಯನ್ನು ಅಳವಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಪೆಕ್ಸ್ ಬ್ಯಾಂಕ್ ನ ನಿಯಮಾನುಸಾರವಾಗಿ ವೆತವನ್ನು ಕೊಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments