ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ(ASRB)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಸ್ವತಂತ್ರ ನೇಮಕಾತಿ ಏಜೆನ್ಸಿಯಾಗಿ ಕ್ಯಾಬಿನೆಟ್ ಅನುಮೋದನೆಯೊಂದಿಗೆ ಸ್ಥಾಪಿಸಲ್ಪಟ್ಟಿರುವ ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ(ಎಎಸ್‌ಆರ್‌ಬಿ)ಯಲ್ಲಿ ಖಾಲಿ ಇರುವ 27 ಮುಖ್ಯಸ್ಥ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25-ಅಕ್ಟೋಬರ್-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-ನವೆಂಬರ್-2024
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 25-ನವೆಂಬರ್-2024
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು Ph.D ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.
ಈ ಹುದ್ದಗೆಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 1500/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* SC/ST/CAT-1/ ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನಿಗದಿಪಡಿಸಲಾಗಿದೆ.
ಕೃಷಿ ವಿಜ್ಞಾನಿ ನೇಮಕಾತಿ ಮಂಡಳಿಯ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಗರಿಷ್ಠ 60 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ 1,44,200/- ರೂ ಗಳಿಂದ 2,18,200/- ರೂ ಗಳ ವರೆಗೆ ಮಾಸಿಕ ವೇತನ ಪಡೆಯಲು ಅರ್ಹರಿರುತ್ತಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments