ಅಸ್ಸಾಂ ರೈಫಲ್ಸ್ ನಲ್ಲಿ ಖಾಲಿ ಇರುವ ಒಟ್ಟು 161 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಅರೆ ಸೇನಾಪಡೆಯಾದ ಅಸ್ಸಾಂ ರೈಫಲ್ಸ್ ನಲ್ಲಿ ಖಾಲಿ ಇರುವ 161 ತಾಂತ್ರಿಕ, ಟ್ರೇಡ್ಸ್ ಮನ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 19-ನವೆಂಬರ್-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ಸಂದರ್ಶನದ ಮೂಲಕ, ಮತ್ತು ಮೆರಿಟ್ ಪಟ್ಟಿ ರಚಿಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
* ಹುದ್ದೆಗಳ ಆಯ್ಕೆ ಪ್ರಕ್ರಿಯೆಯ ಸವಿವರಣೆಗಾಗಿ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಹುದ್ದೆಗಳಿಗೆ ಅನುಗುಣವಾಗುವಂತೆ SSLC/ Diploma/ PUC ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗ್ರೂಪ್ - ಬಿ ಹುದ್ದೆಗಳಿಗೆ 200/- ರೂ ಅರ್ಜಿ ಶುಲ್ಕ ಹಾಗೂ
ಗ್ರೂಪ್ - ಸಿ ಹುದ್ದೆಗಳಿಗೆ 100/-ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 23 ವರ್ಷ ವಯೋಮಿತಿಯನ್ನು ಮೀರಿರಬಾರದು.
- OBC 03 ಅಭ್ಯರ್ಥಿಗಳಿಗೆ ವರ್ಷ
- SC/ ST / ಪ್ರವರ್ಗ-1 ಅಭ್ಯರ್ಥಿಗಳಿಗೆ 05 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವಿವಿಧ ರೀತಿಯ ಮಾಸಿಕ ವೇತನವನ್ನು ನಿಗದಿಪಡಿಸಿದೆ.
-ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments