ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ವಿವಿಧ ವಿಭಾಗದಲ್ಲಿ ಖಾಲಿ ಇರುವ 190 ಸ್ಟಾಪ್ ನರ್ಸ್, ನ್ಯೂರೋ ಸರ್ಜನ್, ಪ್ಲ್ಯಾಸ್ಟಿಕ್ ಸರ್ಜನ್, ದ್ಯುತಿ ಡಾಕ್ಟರ್ಸ್, ನ್ಯೂರೋ ನರ್ಸ್, ಲ್ಯಾಬ್ ಟೆಕ್ನಿಷಿಯನ್ಸ್, ನ್ಯೂರೋ ಲ್ಯಾಬ್ ಟೆಕ್ನಿಷಿಯನ್ಸ್ ಮತ್ತು O.T ಟೆಕ್ನಿಷಿಯನ್ಸ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ04 ಏಪ್ರಿಲ್ 2024ರ ಸಂಜೆ 4 ಘಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
Director cum Dean,
SABVMCRI,
Shivajinagar, Bengaluru,
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು MD/ MS/ DNB/ MBBS / M.SC / B.SC BE ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ರೂ. 500/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವೇತನ ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments