ಮೈಸೂರಿನ ಆಡಳಿತ ತರಬೇತಿ ಸಂಸ್ಥೆ (ATI) ಯಲ್ಲಿ ಖಾಲಿ ಇರುವ ವಿವಿಧ ಬ್ಯಾಕ್ ಲಾಗ್ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಅಹ್ವಾನ

ಮೈಸೂರಿನ ಆಡಳಿತ ತರಬೇತಿ ಸಂಸ್ಥೆ (ATI) ಯಲ್ಲಿ ಖಾಲಿ ಇರುವ 2 ಬೆರಳಚ್ಚುಗಾರರು & ಗ್ರೂಪ್ -ಡಿ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/02/2024 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಯನ್ನು ಸಲ್ಲಿಸಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯಥಿಗಳು ಭಾರತೀಯ ನಾಗರೀಕರಾಗಿರಬೇಕು.
ಹುದ್ದೆಗಳ ವಿವರ : 2
ಬೆರಳಚ್ಚುಗಾರರು : 1
ಗ್ರೂಪ್ -ಡಿ : 1
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಈ ಕೆಳಗಿನಂತೆ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ.
- ಬೆರಳಚ್ಚುಗಾರರ ಹುದ್ದೆಗೆ : ಶೈಕ್ಷಣಿಕ ಪರೀಕ್ಷೆಗಳಲ್ಲಿ ಪಡೆದಿರುವ ಶೇಕಡವಾರು ಅಂಕಗಳ ಆಧಾರದ ಮೇಲೆ 1: 25 ಅನುಪಾತದಲ್ಲಿ ಕೌಶಲ್ಯ ಪರೀಕ್ಷೆಗಳಿಗೆ ಅಭ್ಯರ್ಥಿಗಳನ್ನು ಆಹ್ವಾನಿಸಲಾಗುವುದು ( ಕೌಶಲ್ಯ ಪರೀಕ್ಷೆಯಲ್ಲಿ ಶೇ.50 ರಷ್ಟು ಅಂಕಗಳನ್ನು ಪಡೆದವರನ್ನು ಮಾತ್ರ ಪರಿಗಣಿಸಲಾಗುವುದು) ಅರ್ಹತಾ ಪರೀಕ್ಷೆಯಲ್ಲಿ ಪಡೆದಿರುವ ಅಂಕಗಳು ಮತ್ತು ಕೌಶಲ್ಯ ಪರೀಕ್ಷೆಯಲ್ಲಿ ಪಡೆದಿರುವ ಅಂಕಗಳನ್ನು ಒಟ್ಟುಗೂಡಿಸಿ ಅದರ ಶ್ರೇಯಾಂಕದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
- ಗುಂಪು ಡಿ ಹುದ್ದೆಗೆ : ಅರ್ಹತಾದಾಯಕ ಪರೀಕ್ಷೆಗಳಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಬೆರಳಚ್ಚುಗಾರ ಹುದ್ದೆಗೆ : ಪಿ.ಯು.ಸಿ. ಅಥವಾ ತತ್ಸಮಾನ ವಿದ್ಯಾರ್ಹತೆ ಮತ್ತು ಕನ್ನಡ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಹಿರಿಯ ಬೆರಳಚ್ಚು ಪರೀಕ್ಷೆಯನ್ನು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅಥವಾ ಕನ್ನಡ ಬೆರಳಚ್ಚಿನೊಂದಿಗೆ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ತೇರ್ಗಡೆಯಾಗಿರತಕ್ಕದ್ದು.
* ಗ್ರೂಪ್-ಡಿ ಹುದ್ದೆಗೆ : ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯನ್ನು ತೇರ್ಗಡೆಯಾಗಿರತಕ್ಕದ್ದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನ ನೀಡಲಾಗುವುದು.
* ಬೆರಳಚ್ಚುಗಾರ : 21,400/- ರಿಂದ 42,000/-
* ಗ್ರೂಪ್-ಡಿ : 17000/- ರಿಂದ 52650/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments