ಭಾರತೀಯ ಸೈನಿಕ ಶಾಲೆಯಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಸೇನಾ ಸಿಬ್ಬಂದಿಗಳ ಮಕ್ಕಳಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಆರ್ಮಿ ವೆಲ್ ಫೇರ್ ಎಜುಕೇಷನ್ ಸೊಸೈಟಿಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಆರ್ಮಿ ಪಬ್ಲಿಕ್ ಸ್ಕೂಲ್ ಗಳಲ್ಲಿ ಖಾಲಿ ಇರುವ 8000 ಕ್ಕೂ ಹೆಚ್ಚು ಪೋಸ್ಟ್ ಗ್ರಾಜುವೇಟ್ ಟೀಚರ್, ಟ್ರೈನ್ಡ್ ಗ್ರಾಜುವೇಟ್ ಟೀಚರ್ ಮತ್ತು ಪ್ರೈಮರಿ ಗ್ರಾಜುವೇಟ್ ಟೀಚರ್ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟಗೊಂಡಿದ್ದು, ಅರ್ಜಿ ಸಲ್ಲಿಕೆಗೆ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ ಲೈನ್ ಪರೀಕ್ಷೆ, ಸಂದರ್ಶನ ನಡೆಸಿ ನಂತರದಲ್ಲಿ ಭೋದನಾ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಸ್ನಾತಕೋತ್ತರ ಪದವಿ, ಪದವಿ ವಿದ್ಯಾರ್ಹತೆಯ ಜೊತೆಗೆ B.ED ಪದವಿಯನ್ನು ಶೇಕಡ 50ರಷ್ಟು ಅಂಕಗಳೊಂದಿಗೆ ಪಾಸಾಗಿರಬೇಕು. ಇದರ ಜೊತೆಗೆ ಅಭ್ಯರ್ಥಿಗಳು ಸಿಟಿಇಟಿ ಅಥವಾ ಟಿಇಟಿ ಅರ್ಹತೆ ಹೊಂದಿರಬೇಕು.
ಈ ನೇಮಕಾತಿಗೆ ಹೊಸದಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 40 ವರ್ಷದ ಒಳಗಿರಬೇಕು ಮತ್ತು ಸೇವಾನುಭವ ಹೊಂದಿರುವ ಅಭ್ಯರ್ಥಿಗಳು ಗರಿಷ್ಠ 57 ವರ್ಷದ ಒಳಗಿರಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments