ಬಾಗಲಕೋಟೆಯ ಖಾಸಗಿ ಸಹಕಾರಿ ಬ್ಯಾಂಕಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಬಾಗಲಕೋಟೆ ಜಿಲ್ಲೆಯಲ್ಲಿರುವ ಪ್ರಮುಖ ಖಾಸಗಿ ಸಹಕಾರಿ ಬ್ಯಾಂಕ್ ಆಗಿರುವ ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ನಿ., ಜಮಖಂಡಿಯಲ್ಲಿ ಖಾಲಿ ಇರುವ ಕಿರಿಯ ಸಹಾಯಕರು ಮತ್ತು ಸಿಪಾಯಿ 7 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 04/09/2023 ರೊಳಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ವ್ಯೆವಸ್ಥಾಪಕರು,
ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ನೀ., ಪಾರ್ಥನಳ್ಳಿ ಕಾಂಪ್ಲೆಕ್ಸ್ ಎದುರಿಗೆ,
ಮೊದಲನೇ ಮಹಡಿ, ಥೇಟರ ರೋಡ, ಜಮಖಂಡಿ-587301
ಹುದ್ದೆಗಳ ವಿವರ : 07
- ಕಿರಿಯ ಸಹಾಯಕರು : 01
- ಸಿಪಾಯಿ : 06
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC & PUCವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
* ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಈ ಕೆಳಗಿನಂತೆ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
- ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು ವಯೋಮಿತಿಯ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
- ಕಿರಿಯ ಸಹಾಯಕರು ಹುದ್ದೆಗಳಿಗೆ : 21,400/- ರಿಂದ 42,000/-
- ಸಿಪಾಯಿ ಹುದ್ದೆಗಳಿಗೆ : 17,000/- ರಿಂದ 28,950/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments