ಬಾಗಲಕೋಟೆ ಜಿಲ್ಲೆಯ ಸಹಕಾರಿ ಬ್ಯಾಂಕಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಿ
ಬಾಗಲಕೋಟೆ ಜಿಲ್ಲೆಯಲ್ಲಿರುವ ಪ್ರಮುಖ ಸಹಕಾರಿ ಬ್ಯಾಂಕ್ ಗಳಲ್ಲಿ ಒಂದಾದ ಬಾಪೂಜಿ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತ ಬಾಗಲಕೋಟೆ ಇಲ್ಲಿ ಖಾಲಿ ಇರುವ ಕಿರಿಯ ಸಹಾಯಕರು, ಚಾಲಕ, ಕಾಲುಗರ ಮತ್ತು ಸಿಪಾಯಿ 215 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಬಾಪೂಜಿ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತ,
ಸೆಕ್ಟರ್ ನಂ.25, ಪ್ಲೇಟ್ ನಂ.52-55, 10ನೇ ಮುಖ್ಯ ರಸ್ತೆ ನವನಗರ, ಬಾಗಲಕೋಟ-587103.
ಹುದ್ದೆಗಳ ವಿವರ : 215
- ಕಿರಿಯ ಸಹಾಯಕರು : 150
- ಸಿಪಾಯಿ : 65
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಈ ಕೆಳಗಿನಂತೆ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
- ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು ವಯೋಮಿತಿಯ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
- ಕಿರಿಯ ಸಹಾಯಕರು ಹುದ್ದೆಗಳಿಗೆ : 25,248/-
- ಸಿಪಾಯಿ ಹುದ್ದೆಗಳಿಗೆ : 18,060/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments