ಬಳ್ಳಾರಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ

ಜಿಲ್ಲಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ನಗರಾಭಿವೃದ್ಧಿ ಕೋಶ ಬಳ್ಳಾರಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ 229 ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 13/02/2023 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
ಪ್ರಸ್ತುತ ನೇರಪಾವತಿ ಪೌರಕಾರ್ಮಿಕ ಮತ್ತು ಹೊರಗುತ್ತಿಗೆ ಲೋಡರ್ /ಕ್ಲೀನರ್ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಂದರೆ ನಗರಸಭೆ ಸಿರುಗುಪ್ಪ, ಪುರಸಭೆ ಕಂಪ್ಲಿ, ಸಂಡೂರು, ಕುರುಗೋಡು, ಕುರೇಕುಪ್ಪ, ಪಟ್ಟಣ ಪಂಚಾಯಿತಿ ತೆಕ್ಕಲಕೋಟೆ ಮತ್ತು ಕುಡತಿನಿಗಳಲ್ಲಿ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅದೇ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಲ್ಲಿಸಬಹುದಾಗಿರುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 17000 /- ರಿಂದ 28950 /- ರೂಗಳವರೆಗೆ ವೇತನ ನಿಗದಿಪಡಿಸಿರಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments