Loading..!

ಬಳ್ಳಾರಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:17 ಜನವರಿ 2023
not found

ಜಿಲ್ಲಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ನಗರಾಭಿವೃದ್ಧಿ ಕೋಶ ಬಳ್ಳಾರಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ 229 ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 13/02/2023 ರೊಳಗಾಗಿ ಅರ್ಜಿ ಸಲ್ಲಿಸಬಹುದು.

 ಅರ್ಜಿ ಸಲ್ಲಿಸುವ ವಿಳಾಸ :
ಪ್ರಸ್ತುತ ನೇರಪಾವತಿ ಪೌರಕಾರ್ಮಿಕ ಮತ್ತು ಹೊರಗುತ್ತಿಗೆ ಲೋಡರ್ /ಕ್ಲೀನರ್ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಂದರೆ ನಗರಸಭೆ ಸಿರುಗುಪ್ಪ, ಪುರಸಭೆ ಕಂಪ್ಲಿ, ಸಂಡೂರು, ಕುರುಗೋಡು, ಕುರೇಕುಪ್ಪ, ಪಟ್ಟಣ ಪಂಚಾಯಿತಿ ತೆಕ್ಕಲಕೋಟೆ ಮತ್ತು ಕುಡತಿನಿಗಳಲ್ಲಿ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅದೇ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಲ್ಲಿಸಬಹುದಾಗಿರುತ್ತದೆ.

No. of posts:  229
Application Start Date:  12 ಜನವರಿ 2023
Application End Date:  13 ಫೆಬ್ರುವರಿ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು ಮತ್ತು ದಿನಗೂಲಿ/ ಗುತ್ತಿಗೆ/ ಹೊರಗುತ್ತಿಗೆ/ ಸಮಾನ ಕೆಲಸಕ್ಕೆ ಸಮಾನ ವೇತನದ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 55 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬಳ್ಳಾರಿ ಜಿಲ್ಲಾ, KA,
To Download Official Notification

Comments